ಬೆಂಗಳೂರು: ವಿದ್ಯಾರ್ಥಿಗಳು ಶಾಲೆಯಲ್ಲಿ ಶೌಚಾಲಯ ಸ್ವಚ್ಛಗೊಳಿಸಿದರೆ ತಪ್ಪೇನು? ಜಪಾನ್ ನಲ್ಲಿ ಮಾಡುತ್ತಾರಲ್ವಾ? ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರಾಜ್ಯದ ಹಲವು ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ತೊಳೆಸಿರುವ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಇದೇ ಪ್ರಕರಣದ ಬಗ್ಗೆ ಬಿಜೆಪಿ ಸಂಸದ ಗೋವಿಂದ ಕಾರಜೋಳ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ಜಪಾನ್ ನಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛಗೊಳಿಸುತ್ತಾರೆ. ನಾನು ವಿದ್ಯಾರ್ಥಿಯಾಗಿದ್ದ ಸಮಯದಲ್ಲಿ ನನ್ನ ವಸತಿ ನಿಲಯವನ್ನು ಗುಡಿಸಿ ಸ್ವಚ್ಛಗೊಳಿಸುತ್ತಿದ್ದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಚ ಮಾಡಿದ್ದನ್ನು ದೊಡ್ಡ ಅಪರಾಧ ಎಂಬಂತೆ ಬಿಂಬಿಸಲಾಗುತ್ತಿದೆ. ವಿದ್ಯಾರ್ಥಿಗಳು ಪೊರಕೆ ಹಿಡಿಯುವುದು ಅಪರಾಧ ಎನ್ನುವ ರೀತಿ ಕಾಣುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ಸ್ವಚ್ಚತೆ ಕೆಲಸ ಕೀಳು ಎಂಬ ಭಾವನೆ ಮೂಡುತ್ತಿದೆ ಎಂದು ಅವರು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q