ತಮಿಳುನಾಡಿಗೆ ಕಾವೇರಿ ನೀರನ್ನ ಹರಿಸಲು ಸಿಡಬ್ಲ್ಯೂಎಂಎ ಆದೇಶ ಹೊರಡಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ನಟ ರಿಷಬ್ ಶೆಟ್ಟಿ, ನಮಗೆ ನೀರಿಲ್ಲ, ಬೇರೆಯವರಿಗೆ ಎಲ್ಲಿ ಕೋಡಲು ಆಗುತ್ತದೆ? ಮಳೆ ಇಲ್ಲದೆ ಡ್ಯಾಮ್ ಗಳು ಭರ್ತಿ ಆಗಿಲ್ಲ, ನೀರು ಬಿಡುತ್ತಿರುವುದರಿಂದ ನಮ್ಮ ರೈತರಿಗೆ ಅನ್ಯಾಯವಾಗುತ್ತಿದೆ ಎಂದರು.
ಸಮಸ್ಯೆಗೆ ಎರಡು ಸರ್ಕಾರ ಕೂತು ಮಾತನಾಡಬೇಕು, ರೈತರಿಗೆ ನ್ಯಾಯ ಒದಗಿಸಬೇಕು ಎಂದರು. ಸದ್ಯ ಕಾಂತಾರ 2 ಸ್ಕ್ರಿಪ್ಟ್ ಕೆಲಸದಲ್ಲಿ ನಿರತರಾಗಿರುವ ರಿಷಬ್ ಹೊರಗಡೆ ಇದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಲು ಸಾಧ್ಯವಾಗಿಲ್ಲ ಎಂದಿದ್ದಾರೆ.


