ಬೆಂಗಳೂರು: ತೇಜಸ್ವಿ ಸೂರ್ಯನನ್ನ ‘ಅಮಾವಸ್ಯೆ’ ಎಂದು ಕರೆಯುವ ಎಂಬ ಸಿಎಂ ಸಿದ್ದರಾಮಯ್ಯ ಮಾತಿಗೆ ತೇಜಸ್ವಿ ಸೂರ್ಯ ಪ್ರತಿಕ್ರಿಯೆ ನೀಡಿದ್ದು, “ಅವರು ಏನೇ ಎಂದರೂ ನನಗೆ ಆಶೀರ್ವಾದವೇ” ಎಂದು ಹೇಳಿದರು.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಕೈಗೊಂಡ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ‘ನನ್ನ ತಂದೆ ಸಿದ್ದರಾಮಯ್ಯ ಅವರ ಜೊತೆ ಅಧಿಕಾರಿಯಾಗಿ ಕೆಲಸ ಮಾಡಿದ್ದಾರೆ ಅವರೊಬ್ಬ ಒಳ್ಳೆಯ ಮುಖ್ಯಮಂತ್ರಿ, ವೈಯಕ್ತಿಕವಾಗಿ ಪ್ರಾಮಾಣಿಕರು ಎಂದು ಹೇಳುತ್ತಿದ್ದರು.
ಸಿದ್ದರಾಮಯ್ಯ ವಯಸ್ಸಿನಲ್ಲಿ ನನ್ನ ತಾತನ ಪ್ರಾಯದವರು, ‘ಅವರು ಅಮವಾಸ್ಯೆ ಏನೇ ಹೇಳಲಿ ನನಗೆ ಆಶೀರ್ವಾದದ ಸಮಾನ ‘ ಎಂದು ಸಿದ್ದರಾಮಯ್ಯ ಹೇಳಿಕೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರ ಸಿಎಂ ಸಿದ್ದರಾಮಯ್ಯ ಪ್ರಚಾರ ಕೈಗೊಂಡಿದ್ದು, ಈ ವೇಳೆ ತೇಜಸ್ವಿ ಸೂರ್ಯ ವಿರುದ್ಧ ಸಿಎಂ ಹರಿಹಾಯ್ದಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296