nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026
    Facebook Twitter Instagram
    ಟ್ರೆಂಡಿಂಗ್
    • ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
    • ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!
    • ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
    • ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿ ಜೀವನದಲ್ಲಿ ಯಾವುದು ಕಠಿಣವಲ್ಲ: ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಕಿವಿ ಮಾತು
    ತುಮಕೂರು August 13, 2024

    ವಿದ್ಯಾರ್ಥಿ ಜೀವನದಲ್ಲಿ ಯಾವುದು ಕಠಿಣವಲ್ಲ: ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಕಿವಿ ಮಾತು

    By adminAugust 13, 2024No Comments2 Mins Read
    shubha kalyan

    ತುಮಕೂರು: ವಿದ್ಯಾರ್ಥಿ ಜೀವನದಲ್ಲಿ ಯಾವುದು ಕಠಿಣವಲ್ಲ. ಶ್ರದ್ಧೆ ಮತ್ತು  ಏಕಾಗ್ರತೆ ಇದ್ದರೆ ಎಲ್ಲವೂ ಸಾಧ್ಯ. ಉಜ್ವಲ ಭವಿಷ್ಯ ನಿಮ್ಮದಾಗಿಸಿಕೊಳ್ಳಲು ಕಠಿಣ ಪರಿಶ್ರಮ ಪಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

    ಜಿಲ್ಲೆಯ ಕುಣಿಗಲ್ ತಾಲ್ಲೂಕು ಭಕ್ತರಹಳ್ಳಿ ಇಂದಿರಾ ಗಾಂಧಿ ವಸತಿ ಶಾಲೆ(ಪ.ಜಾ)ಗೆ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು, ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ನಡೆಸುತ್ತಿರುವ ಕಿರು ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿರುವ ಮತ್ತು ವಿಷಯ ಗ್ರಹಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ಏರ್ಪಡಿಸಿ ಪಠ್ಯಾಭ್ಯಾಸ ಮಾಡಿಸಬೇಕು ಎಂದು ಶಿಕ್ಷಕರಿಗೆ ಸೂಚನೆ ನೀಡಿದರಲ್ಲದೇ, ಶಾಲೆಯ ಆಡಳಿತಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ವಹಿಸದ ಶಾಲಾ ಮುಖ್ಯಸ್ಥರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.

    ನಂತರ ಭಕ್ತರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ, ಕೊತ್ತಗೆರೆ ನಾಡ ಕಚೇರಿ, ಕುಣಿಗಲ್ ಪಟ್ಟಣದ ಮಹಾತ್ಮ ಗಾಂಧಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಕುಣಿಗಲ್ ತಾಲೂಕು ಸಾರ್ವಜನಿಕ ಆಸ್ಪತ್ರೆ ಸೇರಿದಂತೆ   ವಿವಿಧ ಸ್ಥಳಗಳಿಗೆ  ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಭಕ್ತರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ  ಕರ್ತವ್ಯಕ್ಕೆ ಗೈರು ಹಾಜರಾದ ವೈದ್ಯರಿಗೆ ಶೋಕಾಸ್ ನೋಟೀಸ್ ನೀಡಲು  ಕ್ರಮಕೈಗೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಡಿ. ಎನ್. ಮಂಜುನಾಥ್ ಅವರಿಗೆ ದೂರವಾಣಿ ಮೂಲಕ ಸೂಚಿಸಿದರು.

    ನಂತರ ಕೊತ್ತಗೆರೆ ಗ್ರಾಮದ ನಾಡ ಕಚೇರಿಗೆ ಭೇಟಿ ನೀಡಿದ ಅವರು ಪಹಣಿಗೆ ಆಧಾರ್ ಜೋಡಣೆ, ಮರಣ ಪ್ರಮಾಣ ಪತ್ರ, ಪಿಂಚಣಿ ವಿತರಣೆ, ಪೌತಿ ಖಾತೆ ಅರ್ಜಿಗಳನ್ನು ವಿಲೇವಾರಿ  ಮಾಡಿರುವ ಬಗ್ಗೆ ಗ್ರಾಮ ಲೆಕ್ಕಾಧಿಕಾರಿ ಶಿಲ್ಪ ಅವರಿಂದ ಮಾಹಿತಿ ಪಡೆದು, ಪೌತಿ ಖಾತೆ ಆಂದೋಲನದಲ್ಲಿ ವಾರಸುದಾರರು ಪೌತಿ ಖಾತೆಗೆ ಅಗತ್ಯವಿರುವ ವಂಶವೃಕ್ಷ, ಮರಣ ಪ್ರಮಾಣ ಪತ್ರ, ಪಹಣಿ ಪತ್ರಗಳನ್ನು ಒದಗಿಸಿದಲ್ಲಿ ೧೫ ದಿನಗಳೊಳಗಾಗಿ ಪೌತಿ ಖಾತೆ ಬದಲಾವಣೆ ಮಾಡಿಕೊಡಬೇಕೆಂದು ಸೂಚನೆ  ನೀಡಿದರು.

    ಮಹಾತ್ಮ ಗಾಂಧಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ೧೦ನೇ ತರಗತಿ ಕೊಠಡಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಹಾಜರಾತಿ ಪರಿಶೀಲಿಸಿದ ಅವರು  ಗೈರು ಹಾಜರಾಗಿದ್ದ ೧೩ ವಿದ್ಯಾರ್ಥಿಗಳ ಬಗ್ಗೆ  ಮಾಹಿತಿ ನೀಡದ  ಶಿಕ್ಷಕರನ್ನು  ತರಾಟೆಗೆ ತೆಗೆದುಕೊಂಡು, ವಿದ್ಯಾರ್ಥಿಗಳ ಹಾಜರಾತಿ ಬಗ್ಗೆ ನಿಗಾ ವಹಿಸಬೇಕೆಂದು ತಿಳಿಸಿದರು.

    ಬಳಿಕ ಕುಣಿಗಲ್ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ತೆರಳಿದ ಅವರು  ಹೊರರೋಗಿ ಚೀಟಿ ವಿತರಣಾ ಕೇಂದ್ರ, ಪ್ರಸವಪೂರ್ವ ಹಾಗೂ ಪ್ರಸವ ನಂತರದ ವಾರ್ಡು, ಐಸಿಯು, ಇಎನ್‌ಟಿ, ವಿಶೇಷ ಚಿಕಿತ್ಸಾ ಘಟಕ, ಶಸ್ತಚಿಕಿತ್ಸಾ ಕೊಠಡಿ ಸೇರಿದಂತೆ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ತಾಯಿ ಮತ್ತು ಮಕ್ಕಳ ಆರೋಗ್ಯ ವಿಚಾರಿಸಿದರು. ಪ್ರಕರಣಗಳ ದಾಖಲು ವಹಿ ಪರಿಶೀಲಿಸುತ್ತಾ ನವಜಾತ ಶಿಶುಗಳಲ್ಲಿ ಜಾಂಡೀಸ್ ಕಂಡು ಬಂದರೆ ಫೋಟೋಥೆರಪಿ ಚಿಕಿತ್ಸೆ ನೀಡುವ ಬಗ್ಗೆ ಆಡಳಿತ ವೈದ್ಯಾಧಿಕಾರಿ ಡಾ.ಗಣೇಶ್ ಬಾಬು ಅವರಿಂದ ಮಾಹಿತಿ ಪಡೆದರು.

    ನಂತರ ಪತ್ರಕರ್ತರೊಂದಿಗೆ  ಮಾತನಾಡಿದ ಅವರು ಆಸ್ಪತ್ರೆಯಲ್ಲಿ ಸಿಬ್ಬಂದಿ ವರ್ಗದ ಕೊರತೆ ಇದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ತಾಲ್ಲೂಕಿನಲ್ಲಿ ನಗು-ಮಗು ಆ್ಯಂಬುಲೆನ್ಸ್ ವಾಹನ ವ್ಯವಸ್ಥೆ ಮಾಡಬೇಕೆಂದು ಆಡಳಿತ ವೈದ್ಯಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದರು.

    ಆಸ್ತಿ ತೆರಿಗೆ ಸಂಗ್ರಹದಲ್ಲಿ ಹಿಂದುಳಿದ ಪುರಸಭೆ :

    ಕುಣಿಗಲ್ ಪುರಸಭೆಯು ಆಸ್ತಿ ತೆರಿಗೆ ಸಂಗ್ರಹದಲ್ಲಿ ಹಿಂದುಳಿದಿದ್ದು, ಮುಂದಿನ ಒಂದು ವಾರದೊಳಗೆ ಆಸ್ತಿ ತೆರಿಗೆ ಸಂಗ್ರಹದಲ್ಲಿ ಪ್ರಗತಿ ಸಾಧಿಸಬೇಕೆಂದು  ಮುಖ್ಯಾಧಿಕಾರಿ ಶಿವ ಪ್ರಸಾದ್ ಅವರಿಗೆ ಸೂಚನೆ ನೀಡಿದರು.

    ಡೆಂಗ್ಯೂ ನಿಯಂತ್ರಣಕ್ಕೆ ಸಹಕರಿಸಲು ಸಾರ್ವಜನಿಕರಲ್ಲಿ ಮನವಿ:

    ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ನಿರಂತರವಾಗಿ ಸ್ವಚ್ಛತೆ ಕಾಪಾಡುವ ಮೂಲಕ  ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮ ವಹಿಸಲು ಎಲ್ಲರ ಸಹಕಾರ ಇರಬೇಕು. ಡೆಂಗಿ ರೋಗ ಲಕ್ಷಣಗಳು ಕಂಡು ಬಂದ ಕೂಡಲೇ ಸಾರ್ವಜನಿಕರು ಉದಾಸೀನ ಮಾಡದೆ ಸರ್ಕಾರಿ ಆಸ್ಪತ್ರೆಯಲ್ಲಿ  ರಕ್ತದ ಮಾದರಿಯನ್ನು ಪರೀಕ್ಷೆ ಮಾಡಿಸಿ ಡೆಂಗ್ಯೂ ದೃಢಪಟ್ಟಲ್ಲಿ ತಪ್ಪದೇ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಮನವಿ ಮಾಡಿದರು.

    ಈ ಸಂದರ್ಭ ತಹಶೀಲ್ದಾರ್ ರಶ್ಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಬೋರೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೆಂಗಳೂರು: ಕರ್ನಾಟಕದಲ್ಲಿ ಕಾವೇರಿ ನೀರು ಹಂಚಿಕೆ ವಿವಾದ ಮತ್ತು ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಆಗಸ್ಟ್ 3ರಂದು ಬೆಂಗಳೂರಿಗೆ ನಿಗದಿಯಾಗಿದ್ದ ತಮಿಳುನಾಡು…

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026

    ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.