ಕಲಬುರಗಿ: ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಕೆಲ ಮುಸ್ಲಿಂ ಯುವಕರು ಓಡಾಟ ನಡೆಸಿದ್ದ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಸಮರ್ಥಿಸಿಕೊಂಡಿದ್ದಾರೆ.
ಪ್ಯಾಲೆಸ್ತೀನ್ಗೆ ಕೇಂದ್ರ ಸರ್ಕಾರವೇ ಬೆಂಬಲ ಸೂಚಿಸಿದೆ. ಹೀಗಿರುವಾಗ ಧ್ವಜ ಹಿಡಿದುಕೊಂಡು ಹೋದರೆ ತಪ್ಪೇನು? ಕೇಂದ್ರ ಸರ್ಕಾರ ಪ್ಯಾಲೆಸ್ತೀನ್ಗೆ ಬೆಂಬಲ ಘೋಷಣೆ ಮಾಡಿರುವ ಕಾರಣವೇ ಧ್ವಜ ಹಿಡಿದಿದ್ದಾರೆ, ಇಲ್ಲಾಂದರೆ ಹಿಡಿಯುತ್ತಿರಲಿಲ್ಲ ಎಂದಿದ್ದಾರೆ.
ಬೇರೆ ದೇಶದ ಬಗ್ಗೆ ಘೋಷಣೆ ಕೂಗಿದರೆ ಅದು ತಪ್ಪು. ಹಾಗೆ ಮಾಡಿದವರು ದೇಶದ್ರೋಹಿಗಳು. ಅಂಥವರನ್ನು ಗಲ್ಲಿಗೇರಿಸಬೇಕು. ಹಾಗೆಂದು ಧ್ವಜ ಹಿಡಿದರೆ ತಪ್ಪಿಲ್ಲ ಎಂದು ಜಮೀರ್ ಹೇಳಿದರು.
ಬಿಜೆಪಿಯವರು ಹಿಂದೂ ಮುಸ್ಲಿಂ ಜಗಳ ತಂದಿಟ್ಟು ಮತ ಕೇಳುತ್ತಾರೆ. ಆದರೆ, ನಾವು ಹಾಗಲ್ಲ. ಮಾಡಿದ ಅಭಿವೃದ್ಧಿ ಕೆಲಸ ಮುಂದಿಟ್ಟುಕೊಂಡು ಮತ ಯಾಚಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q