ಇದೀಗ ಮೆಟಾ ಒಡೆತನದ ಕಂಪನಿಯೂ ತನ್ನ ಬಳಕೆದಾರರಿಗೆ ಹೊಸ ಫೀಚರ್ ಒಂದನ್ನು ಪರಿಚಯಿಸುವ ಮೂಲಕ ಬಳಕೆದಾರರಿಗೆ ಮತ್ತಷ್ಟು ಹತ್ತಿರವಾಗಿದ್ದು, ಈ ಬಾರಿಯೂ ಹೊಸ ವೈಶಿಷ್ಟ್ಯವನ್ನು ತರಲು ಸಿದ್ಧತೆ ನಡೆಸಿದೆ.
ಮೆಟಾ ಒಡೆತನದ ಕಂಪನಿಯೂ ಇದೀಗ ಇಂಟರ್ನೆಟ್ ಇಲ್ಲದೇ ಡಾಕ್ಯೂಮೆಂಟ್, ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುವ ಹೊಸ ಒಫೀಚರ್ ಅನ್ನು ಪರಿಚಯಿಸಲು ಸಿದ್ಧತೆ ನಡೆಸಿದ್ದು, ಯಾವುದೇ ಫೈಲ್ ಗಳನ್ನು ಸುಲಭವಾಗಿ ಕಳುಹಿಸಲು ಸಾಧ್ಯವಾಗುತ್ತದೆ. ಆರಂಭದಲ್ಲಿ ಈ ಹೊಸ ಫೀಚರ್ ಅನ್ನು ಆಯಂಡ್ರಾಯ್ಡ್ ಮೊಬೈಲ್ ಬಳಕೆದಾರರಿಗೆ ನೀಡಲು ಮುಂದಾಗಿದ್ದು, ಆ ಬಳಿಕ ಆಯಪಲ್ ಬಳಕೆದಾರರಿಗೆ ಪರಿಚಯಿಸಲು ಸಂಸ್ಥೆ ಮುಂದಾಗಿದೆ.
ಫೈಲ್ ಹಂಚಿಕೊಳ್ಳಲು, ನೀವು ಮತ್ತೊಬ್ಬ ವ್ಯಕ್ತಿಯ ಮೊಬೈಲ್ನಿಂದ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಬೇಕು. ಇದು ವೈ-ಫೈ ಅಥವಾ ಬ್ಲೂಟೂತ್ ಮೂಲಕ ಕಾರ್ಯನಿರ್ವಹಿಸುತ್ತದೆ. ಹೀಗಾಗಿ ಇಂಟರ್ನೆಟ್ ಸಂಪರ್ಕದ ಅಗತ್ಯವಿಲ್ಲ. ಈ ಮೂಲಕ ನೀವು ಇಂಟರ್ನೆಟ್ ಇಲ್ಲದೆ ನಿಮ್ಮ ಸುತ್ತಲಿನ ಜನರಿಗೆ ಫೈಲ್‌ಗಳನ್ನು ಕಳುಹಿಸಬಹುದು. ಇಂಟರ್ನೆಟ್ ವೇಗವು ನಿಧಾನವಾಗಿರುವ ಅಥವಾ ಕಾರ್ಯನಿರ್ವಹಿಸದಿರುವ ಪ್ರದೇಶಗಳಲ್ಲಿ ಇದು ವಿಶೇಷವಾಗಿ ಉಪಯುಕ್ತವಾಗಿದೆ.
ಈ ಹೊಸ ವೈಶಿಷ್ಟ್ಯದೊಂದಿಗೆ, ನೀವು ಉತ್ತಮ ಗುಣಮಟ್ಟದ ಫೋಟೊಗಳು, ವಿಡಿಯೊಗಳು ಮತ್ತು ಡಾಕ್ಯುಮೆಂಟ್‌ಗಳಂತಹ ದೊಡ್ಡ ಫೈಲ್‌ಗಳನ್ನು ಸುಲಭವಾಗಿ ಹಂಚಿಕೊಳ್ಳಬಹುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA