nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    • ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ
    ರಾಜ್ಯ ಸುದ್ದಿ February 17, 2026

    “ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ”: ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ

    By adminFebruary 17, 2026No Comments2 Mins Read
    santhosh hegde

    ಬೆಂಗಳೂರು:  ಭಾರತದ ಪ್ರಮುಖ ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಜೈನ್ (ಡೀಮ್ಡ್ –ಟು–ಬಿ) ವಿಶ್ವವಿದ್ಯಾಲಯವು “ಸಾಮಾಜಿಕ ಮೌಲ್ಯಗಳ ಕುಸಿತ ಮತ್ತು ಅದರ ಪರಿಣಾಮಗಳು” ಎಂಬ ವಿಷಯದ ಮೇಲೆ ಸಮ್ಮೇಳನವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಭಾರತದ ಸುಪ್ರೀಂ  ಕೋರ್ಟಿನ ಮಾಜಿ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತ  ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರು  ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

    ಸಮಕಾಲೀನ ಸಮಾಜದಲ್ಲಿ ನೈತಿಕ ಮೌಲ್ಯಗಳ ಅಗತ್ಯತೆ ಕುರಿತು ಮಾತನಾಡಿದ ಅವರು, ಲಾಲಸೆ ಮತ್ತು ಕುಸಿಯುತ್ತಿರುವ ನೈತಿಕತೆಯ ಪರಿಣಾಮಗಳ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ  ಅವರು “ಇಂದಿನ ಸಮಾಜದ ಅನೇಕ ಸಮಸ್ಯೆಗಳ ಮೂಲ ಕಾರಣ ನಿಯಂತ್ರಣವಿಲ್ಲದ ಲಾಲಸೆ. ಲಾಲಸೆಗೆ ಮಿತಿ ಇಲ್ಲದಾಗ ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ” ಎಂದು  ಹೇಳಿದರು.


    Provided by
    Provided by

    ಸಮಾಜದ ಆದ್ಯತೆಗಳು ಮತ್ತು ಮೌಲ್ಯಗಳಲ್ಲಿ ಆಗುತ್ತಿರುವ ಬದಲಾವಣೆಯನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು, ಪ್ರಾಮಾಣಿಕತೆಗೆ ಇಂದಿನ ಸಮಾಜದಲ್ಲಿ  ಗೌರವ ಕಡಿಮೆಯಾಗಿರುವುದನ್ನು ಉಲ್ಲೇಖಿಸಿದರು. ಹಾಗೂ  “ಒಮ್ಮೆ ಸಮಾಜವು ಪ್ರಾಮಾಣಿಕತೆಯನ್ನು ಗೌರವಿಸುತ್ತಿತ್ತು ಮತ್ತು ತಪ್ಪು ಮಾಡಿದವರನ್ನು ಕಠಿಣ ನೈತಿಕ ಮೌಲ್ಯಗಳ ಮೂಲಕ ಶಿಕ್ಷಿಸುತ್ತಿತ್ತು. ಇಂದು ಹಣ ಮತ್ತು ಅಧಿಕಾರಕ್ಕೆ ಗೌರವ ಸಿಗುತ್ತಿದೆ; ಆದರೆ ಪ್ರಾಮಾಣಿಕತೆಯನ್ನು ಕಡೆಗಣಿಸಲಾಗುತ್ತಿದೆ.” ಎಂದು ಅವರು ಹೇಳಿದರು.

    ನೈತಿಕ ಆಶಯದ ಮಹತ್ವವನ್ನು ವಿವರಿಸುತ್ತಾ ಅವರು ಸಂತೃಪ್ತಿಯ ನಿಜವಾದ ಅರ್ಥವನ್ನು ವಿವರಿಸಿದರು “ಸಂತೃಪ್ತಿ ಎಂದರೆ ಆಸೆಯಿಲ್ಲದಿರುವುದು ಅಲ್ಲ; ಅದು ಸತ್ಯ ಮತ್ತು ನ್ಯಾಯಯುತ ಮಾರ್ಗದಲ್ಲಿ ಯಶಸ್ಸನ್ನು ಸಾಧಿಸುವ ಸಾಮರ್ಥ್ಯ” ಎಂದು ಅಭಿಪ್ರಾಯಪಟ್ಟರು. ಇದರೊಂದಿಗೆ ಅವರು “ನಿಜವಾದ ಸಂತೋಷವು ಪ್ರಾಮಾಣಿಕ ಆದಾಯದಿಂದ ಬರುತ್ತದೆ; ಅಕ್ರಮವಾಗಿ ಗಳಿಸಿದ ಸಂಪತ್ತಿನಿಂದ ಅಲ್ಲ”, ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

    ಈ ಸಂದರ್ಭದಲ್ಲಿ ಜೈನ್ (ಡೀಮ್ಡ್ –ಟು–ಬಿ) ವಿಶ್ವವಿದ್ಯಾಲಯದ ಪ್ರೊ–ವೈಸ್ ಚಾನ್ಸಲರ್ ಡಾ.ದಿನೇಶ್ ನೀಲಕಂಠ್ ಮಾತನಾಡಿ, ಸಾಮಾಜಿಕ ಮೌಲ್ಯಗಳ ಮಹತ್ವವನ್ನು ಒತ್ತಿ ಹೇಳಿದರು ಮತ್ತು “ಸಿದ್ಧಾಂತಗಳಿಲ್ಲದ ಪ್ರಗತಿ ಎಂದರೆ ಉದ್ದೇಶವಿಲ್ಲದ ಸಮೃದ್ಧಿ. ಮಾನವ ಮೌಲ್ಯಗಳು ಪರಂಪರೆ ಮಾತ್ರವಲ್ಲ, ಅವು ನಮ್ಮ ವರ್ತನೆ ಮತ್ತು ಮನೋಭಾವವನ್ನು ಮಾರ್ಗದರ್ಶಿಸುವ ನೈತಿಕ ದಿಕ್ಕು ತೋರಿಸುವ ಸಾಧನ. ಇಂದಿನ ಪ್ರಗತಿಯ ಪೈಪೋಟಿಯ ಜಗತ್ತಿನಲ್ಲಿ ಪ್ರಾಮಾಣಿಕತೆ ಮತ್ತು ನೈತಿಕತೆ ಕಡಿಮೆಯಾಗುತ್ತಿರುವಾಗ, ನಾವು ಭೌತಿಕವಾಗಿ ಅಭಿವೃದ್ಧಿಯಾದರೂ ನೈತಿಕವಾಗಿ ದಿವಾಳಿಯಾದ ಭವಿಷ್ಯವನ್ನು ನಿರ್ಮಿಸುವ ಅಪಾಯದಲ್ಲಿದ್ದೇವೆ.” ಎಂದು ಹೇಳಿದರು.

    ವಿಚಾರಸಂಕಿರಣದ ಆಯೋಜಕಿಯಾದ  ಸಹ-ಪ್ರಾಧ್ಯಾಪಕಿ ಡಾ. ಟಿ ರೂಪಾ ಅವರು “ಮಾನವೀಯತೆ ಎಂಬುದು ಅಪರಿಚಿತರನ್ನು ಒಂದು ಕುಟುಂಬದಂತೆ ಬೆಸೆಯುವ ಅತ್ಯಂತ ಸೂಕ್ಷ್ಮವಾದ ನೂಲು.ಸಹಾನುಭೂತಿ ಎಂಬುದು ಮಾನವೀಯತೆಯ ಹೃದಯಬಡಿತವಿದ್ದಂತೆ, ಆ ಸಹಾನುಭೂತಿ ಇಲ್ಲವಾದಲ್ಲಿ ಹೃದಯ ಬಡಿತ  ಕೇವಲ ಗದ್ದಲವಾಗಷ್ಟೇ ಉಳಿಯುತ್ತೇವೆ,” ಎಂದು  ನುಡಿದರು. ಹಾಗೂ ಇದೇ ಸಂದರ್ಭದಲ್ಲಿ ಅವರು ಕಾರ್ಯಕ್ರಮದ ಸಂಘಟನಾ ಸಮಿತಿಯ ಶ್ರಮವನ್ನು ಶ್ಲಾಘಿಸಿದರು. ಜೊತೆಗೆ ಎನ್‌ಸಿಸಿ (NCC) ಕೆಡೆಟ್‌ಗಳು ಮತ್ತು ಎನ್‌ಸಿಸಿ ಅಧಿಕಾರಿ ಮೇಜರ್ ರೇಖಾ ಸಿನ್ಹಾ ಅವರ ಅವಿರತ ಪ್ರಯತ್ನಗಳನ್ನು ವಿಶೇಷವಾಗಿ ಗುರುತಿಸಿ ಪ್ರಶಂಸಿಸಿದರು.

    ಈ ಸಮ್ಮೇಳನವು  ಉತ್ತಮ ಮತ್ತು ನೈತಿಕ ಭವಿಷ್ಯ ನಿರ್ಮಾಣಕ್ಕೆ ಸಾಮಾಜಿಕ ಮೌಲ್ಯಗಳ ಅಗತ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿತು. ಜೊತೆಗೆ ಇಂದಿನ ಸಮಾಜದಲ್ಲಿ ನಾಗರಿಕರ ನೈತಿಕ, ಸಾಂಸ್ಕೃತಿಕ ಮತ್ತು ಸಂವಿಧಾನಾತ್ಮಕ ಜವಾಬ್ದಾರಿಗಳ ಬಗ್ಗೆ ವಿದ್ಯಾರ್ಥಿಗಳ ಚಿಂತನೆಗೆ ಉತ್ತೇಜನ ನೀಡಿತು.

    ವರದಿ: ರಾಘವೇಂದ್ರ ಅಡಿಗ, ಎಚ್ಚೆನ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ

    April 14, 2026

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಬೆಂಗಳೂರು: “ವೈಚಾರಿಕತೆ, ವೈಜ್ಞಾನಿಕತೆ ಹಾಗೂ ಮಾನವೀಯತೆ ಇಲ್ಲದಿದ್ದರೆ ಅದು ನಿಜವಾದ ಶಿಕ್ಷಣವಲ್ಲ, ಅದು ಕೇವಲ ಬದುಕುವ ದಾರಿಯಷ್ಟೇ,” ಎಂದು ಮುಖ್ಯಮಂತ್ರಿ…

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.