nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ

    June 20, 2025

    ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!

    June 20, 2025

    ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ

    June 20, 2025
    Facebook Twitter Instagram
    ಟ್ರೆಂಡಿಂಗ್
    • ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ
    • ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!
    • ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ
    • ನನ್ನಲ್ಲಿರುವ ಮಾಹಿತಿ ಬಹಿರಂಗ ಪಡಿಸಿದರೆ ಸರ್ಕಾರದ ಅಡಿಪಾಯ ಅಲುತ್ತದೆ: ಬಿ.ಆರ್. ಪಾಟೀಲ್ ಆಡಿಯೋ ವೈರಲ್
    • ನಂಬರ್ ಪ್ಲೇಟ್ ನ್ನೂ ಬಿಡದೇ ಕೆಎಸ್ ಆರ್ ಟಿಸಿ ಮೇಲೆ ಆವರಿಸಿದ ವಿಮಲ್!
    • ಕಮಿಷನ್ ಗೆ ಅಮೂಲ್ ನ್ನ ಗುತ್ತಿಗೆ ಕೊಡುವಂತ ವ್ಯವಸ್ಥೆ ಮಾಡುತ್ತಿದ್ದಾರೆ: ಡಿ.ಕೆ.ಸುರೇಶ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
    • ಕೆ.ಎನ್.ರಾಜಣ್ಣ ಅವರ 75ನೇ ಅಮೃತ ಮಹೋತ್ಸವ: ಸಿಎಂ ಆಗಮನ ಹಿನ್ನೆಲೆ ಭರ್ಜರಿ ಸಿದ್ಧತೆ
    • ಬೆಂಗಳೂರಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ: ಸಿಎಂಸಿದ್ದರಾಮಯ್ಯ
    ತುಮಕೂರು January 19, 2025

    ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ: ಸಿಎಂಸಿದ್ದರಾಮಯ್ಯ

    By adminJanuary 19, 2025No Comments2 Mins Read
    siddaramaiah

    ತುಮಕೂರು: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು.

    ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.


    Provided by

    ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ ಪರವಾಗಿ ವೃತ್ತಿ ಇದ್ದಾಗ ಸಮಾಜಕ್ಕೆ ಅನುಕೂಲ. ಸಮಾಜದಲ್ಲಿರುವ ಮೇಲು, ಕೆಳ ಜಾತಿಗಳ ನಡುವಿನ ತಾರತಮ್ಯ ಮತ್ತು ಅಸಮಾನತೆ ಕೊನೆಯಾಗುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಕರೆ ನೀಡಿದರು.

    ನಿಮ್ಮ ವಿಶೇಷ ಸಂಚಿಕೆ ನೀವೂ ಓದಿ:

    ಈಗ ವೇದಿಕೆಯಲ್ಲಿ ಬಿಡುಗಡೆಯಾದ ನಿಮ್ಮದೇ ವಿಶೇಷ ಸಂಚಿಕೆ ನೀವೂ ಓದಿ. ಪತ್ರಕರ್ತರ ಕರ್ತವ್ಯ , ಸವಾಲುಗಳ ಪಟ್ಟಿ ಇದೆ. ಅದನ್ನು ಓದಿ, ಪಾಲಿಸಿ ಎಂದರು.

    ಜನ ಪತ್ರಕರ್ತರ ಮೇಲೆ ನಂಬಿಕೆ ಇಟ್ಟಿದ್ದಾರೆ. ಮೌಢ್ಯದ ಸುದ್ದಿಗಳನ್ನು , ಚರ್ಚೆಗಳನ್ನು ನಡೆಸಿ ನೋಡುಗರ, ಓದುಗರ ದಾರಿ ತಪ್ಪಿಸಬೇಡಿ ಎಂದರು.

    ವಿಜ್ಞಾನ, ತಂತ್ರಜ್ಞಾನದ ವೇಗದಲ್ಲೇ ಪತ್ರಿಕೋದ್ಯಮ ಬೆಳೆಯುತ್ತಿದೆ. ಇದು ಅವಕಾಶ , ಸವಾಲು ಎರಡೂ ಆಗಿದೆ ಎಂದರು.

    ದೇಶದ ಪ್ರತಿಯೊಬ್ಬರೂ ಸಂವಿಧಾನ ಓದಬೇಕು. ಆಗ ಹಕ್ಕು–ಕರ್ತವ್ಯ ಎರಡೂ ಗೊತ್ತಾಗುತ್ತದೆ. ನಿಮ್ಮದು ಶಕ್ತಿಯುತ ಮಾಧ್ಯಮ. ಜನ ನಿಮ್ಮ ಕಡೆ ನೋಡ್ತಾ ಇದ್ದಾರೆ. ಈ ಎಚ್ಛರಿಕೆ ಸದಾ ಇರಲಿ ಎಂದರು.

    ಕೆಲವೇ ದಿನದಲ್ಲಿ ಬಸ್ ಪಾಸ್ :

    ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಸದ್ಯದಲ್ಲೇ ನಿಮ್ಮ ಕೈ ಸೇರಲಿದೆ, ಪತ್ರಕರ್ತರ ಕುಟುಂಬಕ್ಕೆ  ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು. ಪತ್ರಕರ್ತರ ಮಾಸಾಶನವನ್ನೂ 3 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದರು.

    ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್,  ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿ ಜಿಲ್ಲೆಯ ಶಾಸಕರುಗಳು ಹಾಗೂ ಹಲವು ಪ್ರಮುಖರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

    ಮೊದಲಿಗೆ ಸಮ್ಮೇಳನದ ಆವರಣದಲ್ಲಿ ಆಯೋಜಿಸಿದ್ದ ಸ್ಟಾಲ್ ಗಳನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು ಮಹಿಳಾ ಸ್ವ ಸಹಾಯ ಸಂಘಗಳು ಸಿದ್ದಪಡಿಸಿದ ತಿಂಡಿ ಸವಿದರು.

    ಕೆ.ವಿ.ಪ್ರಭಾಕರ್ ಅವರಿಗೆ ಅಭಿನಂದಿಸಿದ ಸಮ್ಮೇಳನ:

    ರಾಜ್ಯದ ಪತ್ರಕರ್ತ ಸಮುದಾಯದ ವೃತ್ತಿಪರ ಸಮಸ್ಯೆಗಳಿಗೆ ಅತ್ಯಂತ ಸಹೃದಯತೆಯಿಂದ ಸ್ಪಂದಿಸಿ, ಪರಿಹಾರ ಒದಗಿಸಿಕೊಡುತ್ತಿರುವುದರ ಜೊತೆಗೆ ಸಮ್ಮೇಳನದ ಯಶಸ್ಸಿಗೆ ಸಕಲ ರೀತಿಯಲ್ಲಿ ಸಂಪೂರ್ಣ ಸಹಕಾರ ನೀಡಿದ ಮುಖ್ಯಮಂತ್ರಿಗಳ  ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಸಮ್ಮೇಳನ ವಿಶೇಷ ಅಭಿನಂದನೆ ಸಲ್ಲಿಸಿತು.

    ರಾಜಣ್ಣ ನೀನು ಮನುಸ್ಮೃತಿ ಓದು:

    ಪತ್ರಕರ್ತರ 39ನೇ ರಾಜ್ಯ ಸಮ್ಮೇಳನದ ಉದ್ಘಾಟನಾ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಮನುಸ್ಮೃತಿ ಓದಲು ಹೇಳಿದ ಪ್ರಸಂಗ ನಡೆಯಿತು.

    ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ಸಮಾಜದಲ್ಲಿರುವ ಜಾತಿ ತಾರತಮ್ಯವನ್ನು ಉಲ್ಲೇಖಿಸಿ ಮಾತನಾಡುವಾಗ ಮೇಲು “ಜಾತಿ-ಕೆಳ ಜಾತಿ” ಎನ್ನುವ ಪದ ಬಳಸಿದರು.

    ಈ ವೇಳೆ ಸಚಿವ ರಾಜಣ್ಣ ಅವರು ಮೇಲುಜಾತಿ-ಕೆಳಜಾತಿ ಎನ್ನುವ ಬದಲಿಗೆ ಮುಂದುವರೆದವರು, ಹಿಂದುಳಿದವರು ಎಂದು ಹೇಳಬಹುದು ಎಂದರು.

    ಇದಕ್ಕೆ ಆಕ್ಷೇಪಿಸಿದ ಸಿಎಂ, ಜಾತಿ ಅನ್ನುವುದು ಈ ಸಮಾಜದ ವಾಸ್ತವ. ನೀನು ಮನುಸ್ಮೃತಿ ಓದಿದರೆ ಈ ಬಗ್ಗೆ ಇನ್ನಷ್ಟು ಸ್ಪಷ್ಟವಾಗುತ್ತದೆ. ಜಾತಿಯ ತಾರತಮ್ಯ ಎಷ್ಟು ಭೀಕರವಾಗಿದೆ ಎಂದು ಗೊತ್ತಾಗಬೇಕಾದರೆ ಅದಕ್ಕೆ ಮನುಸ್ಮೃತಿ ಓದು ಎಂದರು.

    ಈ ಬಗ್ಗೆ ಕೆಲ ಕ್ಷಣ ಇಬ್ಬರ ನಡುವೆ ಚರ್ಚೆ ನಡೆಯಿತು. ಬಳಿಕ, ಮುಖ್ಯಮಂತ್ರಿಗಳು  “ನಾನು ಮೇಲು ಜಾತಿ-ಕೆಳ ಜಾತಿ ಅಂತಲೇ ಬಳಸ್ತೀನಿ. ಇದು ನನ್ನ‌ ಸ್ವಾತಂತ್ರ್ಯ, ನೀವು ಹಿಂದುಳಿದವರು–ಮುಂದುವರೆದವರು ಅಂತಲೇ ಬಳಸಿ ಎಂದು ನಗೆಚಟಾಕೆ ಹಾರಿಸಿ ಭಾಷಣ ಮುಂದುವರೆಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕೆ.ಎನ್.ರಾಜಣ್ಣ ಅವರ 75ನೇ ಅಮೃತ ಮಹೋತ್ಸವ: ಸಿಎಂ ಆಗಮನ ಹಿನ್ನೆಲೆ ಭರ್ಜರಿ ಸಿದ್ಧತೆ

    June 20, 2025

    “ಸಮಯೋಚಿತ ಕುಡಿಯುವ ನೀರು ಉಳಿಸಬಲ್ಲದು ಹಲವು ಮೂಕ ಪ್ರಾಣಿಗಳ ಜೀವ”

    June 19, 2025

    ನ್ಯಾಯಾಲಯದ ಗೇಟ್ ನಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು

    June 18, 2025
    Our Picks

    ಬೆಂಗಳೂರಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ

    June 20, 2025

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಸಾಲ ಮರುಪಾವತಿಸಲಿಲ್ಲ ಎಂದು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ!

    June 17, 2025

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ

    June 20, 2025

    ಬೆಂಗಳೂರು: ನಿರ್ದೇಶಕ ನಂದ ಕಿಶೋರ್‌ ಯುವ ನಟರೊಬ್ಬರಿಗೆ ಅವಕಾಶ ನೀಡುವ ಆಮಿಷವೊಡ್ಡಿ ಬರೋಬ್ಬರಿ 22 ಲಕ್ಷ ರೂಪಾಯಿ ವಂಚಿಸಿರುವ ಆರೋಪ…

    ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!

    June 20, 2025

    ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ

    June 20, 2025

    ನನ್ನಲ್ಲಿರುವ ಮಾಹಿತಿ ಬಹಿರಂಗ ಪಡಿಸಿದರೆ ಸರ್ಕಾರದ ಅಡಿಪಾಯ ಅಲುತ್ತದೆ: ಬಿ.ಆರ್. ಪಾಟೀಲ್ ಆಡಿಯೋ ವೈರಲ್

    June 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.