ಚುನಾವಣೆ ಹತ್ತಿರ ಬಂತು ಎಂದರೆ ಮಾತ್ರ ಬಿಜೆಪಿಗೆ ಹಿಂದೂಗಳ ಬಗ್ಗೆ ಎಲ್ಲಿಲ್ಲದ ಪ್ರೇಮ ಉಕ್ಕಿ ಬರುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವ್ಯಂಗ್ಯವಾಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿವಾದ ಮಾಡೋದೆ ಬಿಜೆಪಿಯವರ ಹುಟ್ಟುಗುಣ ಎಂದರು. ಅವರಿಗೆ ಕಾನೂನಿನ ಅರಿವಿಲ್ಲ ಎಂಬುದು ಅವರು ಮಾತನಾಡುವ ರೀತಿಯಲ್ಲೇ ತಿಳಿಯುತ್ತದೆ ಎಂದು ಕಿಡಿಕಾರಿದರು.
ರಾಜ್ಯದ ಹಿಂದೂ ದೇವಸ್ಥಾನಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿಂದೂ ದೇವಸ್ಥಾನಗಳ ಅಭಿವೃದ್ಧಿ, ಅರ್ಚಕರು ಹಾಗೂ ಅವರ ಮಕ್ಕಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ಅನುಷ್ಠಾನಗೊಳಿಸಲು ಬದ್ಧವಾಗಿದೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದರು.
2024ನೇ ಸಾಲಿನ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ವಿಧೇಯಕದಲ್ಲಿ ಧಾರ್ಮಿಕ ಪರಿಷತ್ ಗೆ ಕೆಲವು ತಿದ್ದುಪಡಿ ತಂದಿದ್ದೇವೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ವಿಶ್ವಕರ್ಮ ಸಮುದಾಯಕ್ಕೆ ಅವರ ಬೇಡಿಕೆಯ ಅನುಗುಣವಾಗಿ ಎ,ಬಿ, ಸಿ ಗ್ರೇಡ್ ದೇವಸ್ಥಾನಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಮೊದಲನೆಯದಾಗಿ ಇದು ಪ್ರಮುಖ ತಿದ್ದುಪಡಿಯಾಗಿದೆ. ಇದನ್ನ ಬಿಟ್ರೆ ಯಾವುದೇ ಬದಲಾವಣೆ ಮಾಡಿಲ್ಲ. ಅವೆಲ್ಲವೂ 2003ರ ಕಾಯ್ದೆಯಲ್ಲಿ ಏನು ಇದೆಯೋ ಹಾಗೆ ಇದೆ ಎಂದರು.
ರಾಜ್ಯದ ಹಿಂದೂ ದೇವಾಲಯಗಳಿಗೆ ಬಿಜೆಪಿ ಸರ್ಕಾರದ ಕೊಡುಗೆ ಏನಿಲ್ಲ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಆರೋಪಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ 8 ತಿಂಗಳಿನಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಹಿಂದೂ ದೇವಾಲಯಗಳ ಅಭಿವೃದ್ಧಿಗೆ ನೀಡಿರುವ ವಿವಿಧ ಕೊಡುಗೆಗಳಲ್ಲಿ ಶೇಕಡಾ 25% ರಷ್ಟು ಸಹ ಬಿಜೆಪಿಯವರು ನೀಡಿರುವುದಿಲ್ಲ ಎಂದು ರಾಮಲಿಂಗಾ ರೆಡ್ಡಿ ಕಿಡಿಕಾರಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


