ಕೊರಟಗೆರೆ: ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿಯ ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇಗಲಾಲ ಗ್ರಾಮದಲ್ಲಿ ಸಮದಾಯ ಭವನ ಶಿಥಿಲಾವಸ್ಥೆಯಲ್ಲಿ ನಿಂತಿದೆ.
ಸುಮಾರು ವರ್ಷಗಳಿಂದ ಪಾಳು ಬಿದ್ದ ಸಮುದಾಯ ಭವನದ ಪುನಶ್ಚೇತನ ಯಾವಾಗ ಅಂತ ಇಲ್ಲಿನ ಸಾರ್ವಜನಿಕರು ಪ್ರಶ್ನಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದ ಸಮುದಾಯ ಭವನ ಬಾಳು ಬಿದ್ದಿದೆ ಎಂದು ಆರೋಪಿಸಿದ್ದಾರೆ.
ಪುನಶ್ಚೇತನ ಇಲ್ಲದೇ ಕುಡುಕರ ಅಡ್ಡೆಯಾದ ಸಮುದಾಯ ಭವನದ ಉದ್ದಾರ ಯಾವಾಗ ಅಂತ ಜನ ಪ್ರಶ್ನೆ ಮಾಡುತ್ತಿದ್ದಾರೆ. ನೇಗಲಾಲ ಗ್ರಾಮದ ಸಮುದಾಯ ಭವನ ಕುಡುಕರ ಅನೈತಿಕ ಚಟುವಟಿಕೆಗಳ ಅಡ್ಡೆಯಾಗಿದ್ದು, ಎಲ್ಲಿ ನೋಡಿದರೂ ಕಸ ಕಸ ಕಸ..?ಮೇಲ್ಚಾವಣಿ ಇಲ್ಲದೆ ಸೊರಗುತ್ತಿದೆ.
ಗ್ರಾಮದ ನರಸಿಂಹಸ್ವಾಮಿ ಮತ್ತು ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿರುವ ಸಮುದಾಯ ಭವನದ ಕಥೆ ಇದಾಗಿದೆ. ವಿಶ್ವ ಬ್ಯಾಂಕ್ ನೆರವಿನ ಯೋಜನೆ ಅನುದಾನದಲ್ಲಿ ನಿರ್ಮಾಣವಾಗಿದ್ದ ಸಮುದಾಯ ಭವನ ಈಗ ಕುಡುಕರ ಅಡ್ಡೆಯಾಗಿದೆ.
ಸಮುದಾಯ ಭವನದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿಪಡಿಸಿ ಗ್ರಾಮದ ಬಡವರಿಗೆ ಅನುಕೂಲ ಮಾಡಿಕೊಡಬೇಕೆಂದು ಗ್ರಾಮ ಪಂಚಾಯತಿ ಸದಸ್ಯ ಅಂಜನಾದ್ರಿ ವೀರಭದ್ರಪ್ಪ ಮನವಿ ಮಾಡಿದ್ದಾರೆ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸಮುದಾಯ ಭವನದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಾರಾ ಎಂದು ಕಾದು ನೋಡಬೇಕಿದೆ.
ವರದಿ : ಮಂಜುಸ್ವಾಮಿ ಎಂ.ಎನ್., ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx