ಮೋದಿ 3.0 ಸರ್ಕಾರದ ಮೊದಲ ಬಜೆಟ್ ಗೆ ಇನ್ನೇನು ಒಂದೇ ದಿನ ಬಾಕಿ ಉಳಿದಿದ್ದು, ಈ ಬಾರಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುವ ಬಜೆಟ್ ಬಗ್ಗೆ ಜನ ಸಾಮಾನ್ಯರಿಂದ ಹಿಡಿದು ಉದ್ಯಮಿಗಳವರೆಗೆ ಅನೇಕ ನಿರೀಕ್ಷೆ ಹೊಂದಿದ್ದಾರೆ.
ಹಣಕಾಸು ಸಚಿವ ನಿರ್ಮಾಲಾ ಸೀತಾರಾಮನ್ ಜುಲೈ 23 ರಂದು ಬೆಳಿಗ್ಗೆ 11 ಗಂಟೆಗೆ ಕೇಂದ್ರ ಬಜೆಟ್ 2024 ಅನ್ನು ಮಂಡಿಸಲಿದ್ದಾರೆ.ಸಂಸತ್ತಿನ ಬಜೆಟ್ ಅಧಿವೇಶನವು ಜುಲೈ 22 ರಂದು ಪ್ರಾರಂಭವಾಗಲಿದ್ದು, ಆಗಸ್ಟ್ 12, 2024 ರಂದು ಮುಕ್ತಾಯವಾಗಲಿದೆ.
ಈ ಒಕ್ಕೂಟ ಸರ್ಕಾರದ ಬಜೆಟ್ ಹಣದುಬ್ಬರ, ಕೃಷಿ, ಶಿಕ್ಷಣ, ಆರೋಗ್ಯ ಮತ್ತು ಮೂಲಸೌಕರ್ಯವನ್ನು ಸ್ಥಿರಗೊಳಿಸುವ ಮೂಲಕ ಆರ್ಥಿಕ ಬೆಳವಣಿಗೆಯ ಮೇಲೆ ಹೆಚ್ಚು ಗಮನಹರಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 23 ಜುಲೈ 2024 ರಂದು ನಡೆಯಲಿರುವ ಬಜೆಟ್ 2024 ಅನ್ನು ಅಧಿಕೃತವಾಗಿ ಅನುಮೋದಿಸಿದ್ದಾರೆ. ಅವರು ಜುಲೈ 22 ರಿಂದ ಪ್ರಾರಂಭವಾಗುವ ಬಜೆಟ್ ಅಧಿವೇಶನವನ್ನು ಆಗಸ್ಟ್ 12, 2024 ರವರೆಗೆ ವಿಸ್ತರಿಸುವುದಾಗಿ ಘೋಷಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA