nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚುನಾವಣೆಯಲ್ಲಿ ಸೋತಾಗ ಇವಿಎಂ ತಿರುಚಲಾಗುತ್ತದೆ ಎನ್ನುತ್ತೀರಿ– ಗೆದ್ದಾಗ ಏನೂ ಹೇಳುವುದಿಲ್ಲ: ಸುಪ್ರೀಂ ಕೋರ್ಟ್
    ತುಮಕೂರು November 28, 2024

    ಚುನಾವಣೆಯಲ್ಲಿ ಸೋತಾಗ ಇವಿಎಂ ತಿರುಚಲಾಗುತ್ತದೆ ಎನ್ನುತ್ತೀರಿ– ಗೆದ್ದಾಗ ಏನೂ ಹೇಳುವುದಿಲ್ಲ: ಸುಪ್ರೀಂ ಕೋರ್ಟ್

    By adminNovember 28, 2024No Comments1 Min Read
    evm

    ತುಮಕೂರು: ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನವೆಂಬರ್ 26ರಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

    ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ. ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಮತ್ತಷ್ಟು ಸುಗಮವಾಗಿದೆ.

    ಈ ಹಿಂದೆ ಆಂಧ್ರದಲ್ಲಿನ ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸಿದಾಗ ರಾಜಕೀಯ ನಾಯಕರಾದ ಚಂದ್ರಬಾಬು ನಾಯ್ಡು ಸೋತಾಗ ಮತ್ತು ಜಗನ್ ಮೋಹನ್ ರೆಡ್ಡಿ ಇತ್ತೀಚಿನ ಚುನಾವಣೆಗಳಲ್ಲಿ ಸೋತಾಗ ಅವರೂ ಸಹ ಒಬ್ಬರಿಗೊಬ್ಬರು ಇವಿಎಂಗಳನ್ನು ತಿರುಚಬಹುದು ಎಂಬ ಆರೋಪ–ಪ್ರತ್ಯಾರೋಪಗಳನ್ನು ಸ್ಮರಿಸಿ ಅರ್ಜಿದಾರರ ವಾದವನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ತಿರುಚಿಲ್ಲ, ಸೋತಾಗ ಇವಿಎಂಗಳನ್ನು ತಿರುಚಲಾಗುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಇಂಥ ವಾದ ಮಂಡಿಸಲು ಇದು ಸೂಕ್ತ ಜಾಗವಲ್ಲ ಎಂದು ವಿಭಾಗೀಯ ಪೀಠ ಇದೇ ವೇಳೆ ಅಭಿಪ್ರಾಯಪಟ್ಟಿದೆ.

    ಅರ್ಜಿದಾರರು, ಇವಿಎಂ ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಪುನಃ ಸ್ಥಾಪಿಸಬೇಕು ಎಂಬ ಕೋರಿಕೆಯೊಂದಿಗೆ, ಚುನಾವಣೆಯ ಸಮಯದಲ್ಲಿ ಹಣ, ಮದ್ಯ ಸೇರಿದಂತೆ ಆಮಿಷಗಳನ್ನು ಒಡ್ಡುವುದು ಸಾಬೀತಾದಲ್ಲಿ ಅಭ್ಯರ್ಥಿಗಳನ್ನು ಕನಿಷ್ಠ 5 ವರ್ಷ ಚುನಾವಣಾ ಸ್ಪರ್ಧೆಯಿಂದ ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು. ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ಮತದಾರರಿಗೆ ಶಿಕ್ಷಣ ಕಾರ್ಯಕ್ರಮ ಆಯೋಜಿಸಬೇಕು. ರಾಜಕೀಯ ಪಕ್ಷಗಳ ನಿಧಿಯನ್ನು ಪರಿಶೀಲಿಸಲು ತನಿಖಾ ವ್ಯವಸ್ಥೆ ರೂಪಿಸಬೇಕು. ಚುನಾವಣಾ ಸಂಬಂಧಿ ಹಿಂಸಾಚಾರಗಳನ್ನು ತಡೆಗಟ್ಟಲು ನೀತಿ ರೂಪಿಸಬೇಕು ಎಂದು ಮನವಿ ಮಾಡಿದ್ದರು.

    ಈ ಎಲ್ಲಾ ಕೋರಿಕೆಗಳನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ರಾಜಕೀಯ ಪಕ್ಷಗಳಿಗೆ ಈ ವ್ಯವಸ್ಥೆಯಿಂದ ಯಾವುದೇ ತೊಂದರೆ ಇಲ್ಲ. ನಿಮಗೆ ಸಮಸ್ಯೆ ಇದೆ ಎಂದು ಅಭಿಪ್ರಾಯಪಟ್ಟಿತಲ್ಲದೆ, ಇದನ್ನೆಲ್ಲ ವಾದಿಸುವ ಸ್ಥಳ ಇದಲ್ಲವೆಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ತುಮಕೂರು ದಸರಾ–2026 ಉತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ಆಯೋಜಿಸಲು ಉದ್ದೇಶಿಸಲಾಗಿದ್ದ ಹೆಲಿಕ್ಯಾಪ್ಟರ್ ರೈಡ್ ಗೆ (Helicopter Ride) ತುಮಕೂರು ವಿಶ್ವವಿದ್ಯಾನಿಲಯವು…

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.