ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಂದುವರಿದಂತೆ ಬೆಚ್ಚಿ ಬೀಳಿಸುವ ಸಂಗತಿಗಳು ಬಯಲಾಗುತ್ತಲೇ ಇದ್ದು, ಆರೋಪಿಗಳು ರೇಣುಕಾಸ್ವಾಮಿಯನ್ನು ಕೊಂದ ನಂತರ ಅವರ ಮೈ ಮೇಲಿದ್ದ ಚಿನ್ನದ ಆಭರಣಗಳನ್ನು ದೋಚಿದ್ದ ವಿಚಾರ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಆರೋಪಿಗಳಾದ ದರ್ಶನ್ ಮತ್ತು ಸಹಚರರನ್ನು ಕೋರ್ಟ್‌ನಲ್ಲಿ ಹಾಜರುಪಡಿಸಿದ್ದಾಗ ವಾದ ಮಂಡಿಸಿದ್ದ ಪೊಲೀಸ್ ಪರ ವಿಶೇಷ ಅಭಿಯೋಜಕರು, ಆರೋಪಿಗಳು ರೇಣುಕಾಸ್ವಾಮಿಗೆ ವಿದ್ಯುತ್ ಶಾಕ್ ಕೊಟ್ಟು ಕ್ರೌರ್ಯ ಮೆರೆದಿದ್ದರು ಎಂಬ ಭಯಾನಕ ಸಂಗತಿಯನ್ನು ಬಹಿರಂಗಪಡಿಸಿದ್ದರು.
ಆರೋಪಿಗಳ ತಂಡವು ಇದೀಗ ಅದಕ್ಕಿಂತಲೂ ಹೇಯ ಕೃತ್ಯ ಎಸಗಿರುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಚಿನ್ನದ ಆಭರಣಗಳನ್ನು ಆತ ದೋಚಿದ್ದ. ರೇಣುಕಾಸ್ವಾಮಿ ಅಪಹರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಚಿತ್ರದುರ್ಗ ಜಿಲ್ಲೆಯ ದರ್ಶನ್ ಅಭಿಮಾನಿ ಬಳಗದ ಅಧ್ಯಕ್ಷ ರಾಘವೇಂದ್ರ ಎಂಬಾತನ ಪೈಶಾಚಿಕ ಕೃತ್ಯ ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ ಎಂದು ವರದಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


