ಹೈದ್ರಾಬಾದ್: ದೇವಸ್ಥಾನಗಳು ಭಕ್ತರಿಂದ ನಡೆಯಬೇಕೇ ಹೊರತು ಸರ್ಕಾರದ ಆಡಳಿತದಿಂದಲ್ಲ. ಎಲ್ಲಿ ಭಕ್ತಿ ಇಲ್ಲವೋ ಅಲ್ಲಿ ಪವಿತ್ರತೆ ಇರುವುದಿಲ್ಲ ಎಂದು ಇಶಾ ಫೌಂಡೇಶನ್ ಸಂಸ್ಥಾಪಕ ಹಾಗೂ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಹೇಳಿದ್ದಾರೆ.
ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬಿನಂಶವಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಭಕ್ತರು ತಿನ್ನುವ ದೇವಸ್ಥಾನದ ಪ್ರಸಾದವು ಅಸಹ್ಯಕರವಾಗಿದೆ. ಅದಕ್ಕಾಗಿಯೇ ದೇವಸ್ಥಾನಗಳು ಭಕ್ತರಿಂದ ನಡೆಯಬೇಕೇ ಹೊರತು ಸರ್ಕಾರದ ಆಡಳಿತದಿಂದಲ್ಲ. ಎಲ್ಲಿ ಭಕ್ತಿ ಇಲ್ಲವೋ ಅಲ್ಲಿ ಪವಿತ್ರತೆ ಇರುವುದಿಲ್ಲ. ಹಿಂದೂ ದೇವಾಲಯಗಳನ್ನು ಹಿಂದೂಗಳು ನಡೆಸ ಬೇಕೆ ಹೊರತು ಸರ್ಕಾರದ ಆಡಳಿತದಿಂದಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ತಿರುಮಲ ತಿರುಪತಿ ತಿಮ್ಮಪ್ಪನ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಕುರುಹು ಕಂಡುಬಂದಿದೆ ಎಂಬ ಇತ್ತೀಚಿನ ಲ್ಯಾಬ್ ವರದಿಯು ದೇಶಾದ್ಯಂತ ಸಂಚಲನ ಮೂಡಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q