ಬೆಂಗಳೂರು: ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ರಾಜಸ್ಥಾನದಿಂದ ತರಿಸಲಾಗಿದ್ದ ಮಾಂಸ ಕುರಿಯದ್ದೋ, ನಾಯಿಯದ್ದೋ ಎನ್ನುವ ವಿವಾದಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲ್ಯಾಬ್ ರಿಪೋರ್ಟ್ ಆಹಾರ ಇಲಾಖೆಯ ಕೈಸೇರಿದ್ದು, ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್ ಅಂತಿಮವಾಗಿ ಈ ವಿವಾದಕ್ಕೆ ತೆರೆ ಎಳೆದಿದ್ದಾರೆ.
ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪತ್ತೆಯಾಗಿರುವುದು ಕುರಿ ಮಾಂಸ. ಲ್ಯಾಬ್ ರಿಪೋರ್ಟ್‌ನಲ್ಲಿ ಇದು ಕುರಿ ಮಾಂಸ ಎಂದು ಸಾಬೀತಾಗಿದೆ ಎಂದು ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್ ತಿಳಿಸಿದ್ದಾರೆ.
ಕುರಿ ಮಾಂಸವನ್ನು ಪುನೀತ್ ಕೆರೆಹಳ್ಳಿ ಮತ್ತು ತಂಡ ನಾಯಿ ಮಾಂಸ ಅಂತ ವಿವಾದ ಎಬ್ಬಿಸಿತ್ತು. ಇದರಿಂದಾಗಿ ಸಾರ್ವಜನಿಕರು ತೀವ್ರ ಆತಂಕಕ್ಕೊಳಗಾಗಿದ್ದರು. ಅಲ್ಲದೇ ಮಟನ್ ಅಂಗಡಿಗಳು ಹಾಗೂ ಹೊಟೇಲ್ ಗಳಿಗೆ ಹೋಗಲು ಜನರು ಹಿಂದೇಟು ಹಾಕಿದ್ದರು. ಇದೀಗ ಇದು ಕುರಿ ಮಾಂಸ ಅಂತ ಬಹಿರಂಗಗೊಂಡಿದೆ. ಈ ಮೂಲಕ ಪುನೀತ್ ಕೆರೆಹಳ್ಳಿ ಹಾಗೂ ತಂಡದ ವಿರುದ್ಧ ಕಾನೂನು ಕ್ರಮಕೈಗೊಳ್ಳುವ ಸಾಧ್ಯತೆ ಇದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


