ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಕ್ಕಳೆಂದರೆ ಎಲ್ಲಿಲ್ಲದ ಪ್ರೀತಿ. ಚುನಾವಣೆ ರ‍್ಯಾಲಿ ಇರಲಿ, ರಕ್ಷಾಬಂಧನವೇ ಇರಲಿ, ಎಲ್ಲಿಯೇ ಮಕ್ಕಳನ್ನು ಕಂಡರೂ ಅವರೊಂದಿಗೆ ಮೋದಿ ಬೆರೆಯುತ್ತಾರೆ. ಅವರ ಜತೆ ಒಂದಷ್ಟು ಕಾಲ ಕಳೆಯುತ್ತಾರೆ.
ನರೇಂದ್ರ ಮೋದಿ ಅವರು ಬುಧವಾರ (ಜೂನ್ 26) ಸಂಸತ್ ಅಧಿವೇಶನ, ಪ್ರತಿಪಕ್ಷಗಳ ಗಲಾಟೆ, ನೂತನ ಸ್ಪೀಕರ್ ಆಯ್ಕೆಯ ಭರಾಟೆಯ ಮಧ್ಯೆಯೂ ಮೋದಿ ಅವರು ಇಬ್ಬರು ಪುಟಾಣಿಗಳೊಂದಿಗೆ ಕಾಲ ಕಳೆದಿದ್ದಾರೆ. ಇಬ್ಬರು ಪುಟಾಣಿಗಳೊಂದಿಗೆ ಮೋದಿ ಸಮಯ ಕಳೆದ ವಿಡಿಯೊ ಈಗ ಭಾರಿ ವೈರಲ್ ಆಗಿದೆ.ಆ ಇಬ್ಬರು ಪುಟಾಣಿಗಳು ಯಾರು ಎಂದು ಎಲ್ಲರಿಗೂ ಪ್ರಶ್ನೆಯಾಗಿದ್ದು ಇಲ್ಲಿದೆ ಉತ್ತರ.
ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರ ಇಬ್ಬರು ಮೊಮ್ಮಕ್ಕಳು ಸಂಸತ್ ಗೆ ಆಗಮಿಸಿದ್ದಾರೆ. ಅವರು ನರೇಂದ್ರ ಮೋದಿ ಅವರ ಕಚೇರಿಗೆ ತೆರಳಿದ್ದು, ಇಬ್ಬರೂ ಆಗಮಿಸುತ್ತಲೇ ಮೋದಿ ಅವರು ನಗುತ್ತಲೇ ಅವರನ್ನು ಸ್ವಾಗತಿಸಿದ್ದಾರೆ. ಇನ್ನು, ಪುಟಾಣಿಗಳೂ ಅಷ್ಟೇ, ಮೋದಿ ಅವರ ಎದುರು ದೇಶಭಕ್ತಿ ಗೀತೆಯನ್ನು ಒಟ್ಟಿಗೆ ಹಾಡುವ ಮೂಲಕ ಗಮನ ಸೆಳೆದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA