ತಮಿಳುನಾಡಿನ ಧರ್ಮಪುರಿಯಿಂದ ನಗರಕ್ಕೆ ಬಸ್ ನಲ್ಲಿ ಬಂದು ರಾಜಧಾನಿಯಲ್ಲಿ ಮನೆಗಳ್ಳತನ ಮಾಡುತ್ತಿದ್ದ ಮಾಡುತ್ತಿದ್ದ ಕುಖ್ಯಾತ ಖದೀಮನನ್ನ ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ರಾಮಸ್ವಾಮಿ ಬಂಧಿತ ಆರೋಪಿಯಾಗಿದ್ದು 30 ಲಕ್ಷ ತೂಕದ 602 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಂಡು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ತಮಿಳುನಾಡು ಮೂಲದ ಆರೋಪಿ ಕಳೆದ 25 ವರ್ಷಗಳ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಬನಶಂಕರಿ, ಸಿ. ಕೆ. ಅಚ್ಚುಕಟ್ಟು, ಮಡಿವಾಳ, ರಾಮಮೂರ್ತಿನಗರ, ಕುಮಾರಸ್ವಾಮಿ ಲೇಔಟ್ ಸೇರಿದಂತೆ ನಗರ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 13ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಹಲವು ಬಾರಿ ಜೈಲಿಗೆ ಹೋಗಿ ಬಂದಿದ್ದ. 2016ರಿಂದ ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳ್ಳತನ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ ರಾಮಸ್ವಾಮಿ ಹಿಂದೆ ವ್ಯವಸ್ಥಿತವಾಗಿ ಗ್ಯಾಂಗ್ ಕಟ್ಟಿಕೊಂಡು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ. ಧರ್ಮಪುರಿಯ ಬಸ್ ನಿಲ್ದಾಣದ ಪಾರ್ಕಿಂಗ್ ನಲ್ಲಿ ಬೈಕ್ ನಿಲ್ಲಿಸಿ ಅಲ್ಲಿಂದ ಬಸ್ ನಲ್ಲಿ ನಗರಕ್ಕೆ ಬಂದು ಬೀಗ ಹಾಕಿರುವ ಮನೆಗಳನ್ನ ಗುರಿಯಾಗಿಸಿ ಕಳ್ಳತನ ಮಾಡುತ್ತಿದ್ದ. ಕದ್ದ ನಂತರ ಊರಿಗೆ ಹೋಗಿ ಮಾರಾಟ ಮಾಡಿ ಅದರಿಂದ ಬಂದ ಹಣದಿಂದ ಮೋಜು ಜೀವನ ನಡೆಸುತ್ತಿದ್ದ. ಇತ್ತೀಚೆಗೆ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಕೃತ್ಯವೆಸಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದರು. ತನಿಖೆ ವೇಳೆ ಸಿಕ್ಕ ಸಿಸಿಟಿವಿ ದೃಶ್ಯಾವಳಿ ಆಧಾರದ ಮೇರೆಗೆ ಆರೋಪಿಯನ್ನ ಧರ್ಮಪುರಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಂಜಾ, ಅಕ್ರಮ ಮದ್ಯ ಮಾರಾಟದಲ್ಲಿ ಭಾಗಿಯಾಗಿದ್ದ. 2015ರವರೆಗೂ ಆರೋಪಿ ವಿರುದ್ಧ ಸುಮಾರು 13ಕ್ಕೂ ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನ ಭೀತಿಯಿಂದ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ. ಸ್ಥಳೀಯವಾಗಿ ಅಕ್ರಮವಾಗಿ ಗಾಂಜಾ ತರಿಸಿಕೊಂಡು ಮಾರಾಟ ಮಾಡುತ್ತಿದ್ದ. ಬಂದ ಹಣದಲ್ಲಿ ಐಷರಾಮಿ ಜೀವನ ನಡೆಸುತ್ತಿದ್ದ. ಇತ್ತೀಚೆಗೆ ತಮಿಳುನಾಡು ಪೊಲೀಸರು ಗಾಂಜಾ ವ್ಯವಸ್ಥಿತ ಜಾಲವನ್ನ ಬೇಧಿಸಿದ್ದರಿಂದ ಬಂಧನ ಭೀತಿಯಿಂದಲೂ ನಗರಕ್ಕೆ ಬಂದು ಮನೆಗಳ್ಳತನ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ಎಂದು ನಗರ ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


