ಮಹಿಳೆ ಎಂಬ ಕಾರಣಕ್ಕೆ ಗಂಡನನ್ನೇ ಕೊಲೆ ಮಾಡಿದ್ದ ಆರೋಪಿಗೆ ಜಾಮೀನು ನೀಡಲಾಗದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡನನ್ನು ಕತ್ತು ಸೀಳಿ ಕೊಲೆಗೈದಿದ್ದ ಡಿಲ್ಲಿ ರಾಣಿ ಎಂಬವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ನ್ಯಾಯಪೀಠ ಜಾಮೀನು ನಿರಾಕರಿಸಿ ಆದೇಶಿಸಿದೆ.
ಆರೋಪಿಗೆ ತನ್ನ ಕೈಗಳಿಗೆ ಗಾಯ ಮಾಡಿಕೊಂಡು, ತನಗೆ ಸೇರಿದ ಮಾಂಗಲ್ಯ ಸರ ಹಾಗೂ ಕಿವಿಯೋಲೆ ಬಚ್ಚಿಟ್ಟಿದ್ದು, ಆ ಮೂಲಕ ತನಿಖೆಯ ದಿಕ್ಕು ತಪ್ಪಿಸಲು ಪ್ರಯತ್ನಿಸಿದ್ದಾರೆ. ಮಾಂಗಲ್ಯ ಸರ ಮತ್ತು ಕಿವಿಯೋಲೆ, ಮಹಿಳೆಯ ರಕ್ತದ ಕಲೆಗಳಿದ್ದ ನೈಟಿಯನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಘಟನೆ ನಡೆದ ರಾತ್ರಿ ಶಂಕರರೆಡ್ಡಿ ಮತ್ತು ಅರ್ಜಿದಾರೆ ಮಧ್ಯೆ ಜಗಳವಾಗಿದೆ. ನಿದ್ದೆಯಿಂದ ಎಚ್ಚರಗೊಂಡು ನೋಡಿದಾಗ ತಂದೆ ರಕ್ತದ ಮಡುವಿನಲ್ಲಿ ಬಿದ್ದಿದ್ದರು ಎಂಬುದಾಗಿ ಮಹಿಳೆಯ ಅಪ್ರಾಪ್ತ ಪುತ್ರ ಸಹ ಸಾಕ್ಷ್ಯ ನುಡಿದಿದ್ದಾರೆ. ಹಾಗಾಗಿ, ಈ ಹಂತದಲ್ಲಿ ಮೇಲ್ನೋಟಕ್ಕೆ ಮಹಿಳೆಯ ವಿರುದ್ಧ ಸಾಕ್ಷ್ಯಗಳಿವೆ. ಅಪರಾಧ ಕೃತ್ಯ ಗಂಭೀರ ಸ್ವರೂಪದ್ದಾಗಿದ್ದು, ಆರೋಪಿ ಮಹಿಳೆ ಎಂಬ ಮಾತ್ರಕ್ಕೆ ಜಾಮೀನು ನೀಡಲಾಗದು ಎಂದು ಹೈಕೋರ್ಟ್ ಹೇಳಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


