ಮೈಸೂರು: ಭಾರತದಲ್ಲಿದ್ದುಕೊಂಡು ಪಾಕಿಸ್ತಾನಕ್ಕೆ ಜೈಕಾರ ಹಾಕುವವರನ್ನು ಗುಂಡಿಕ್ಕಿ ಕೊಲ್ಲಬೇಕು, ದೇಶದ್ರೋಹಿಗಳೆಂದು ಘೋಷಿಸಿ ಶಿಕ್ಷೆ ವಿಧಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎ.ಎಚ್. ವಿಶ್ವನಾಥ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶತ್ರು ರಾಷ್ಟ್ರದ ಪರ ಜೈಕಾರ ಕೂಗಿದವರನ್ನು ಸುಮ್ಮನೆ ಬಿಟ್ಟು ಕಳುಹಿಸುವುದು ಸರಿಯಲ್ಲ. ನಮ್ಮ ದೇಶದ ಅನ್ನ ತಿಂದು, ನಮ್ಮ ನೀರು ಕುಡಿದು ಶತ್ರುಗಳಿಗೆ ಜೈ ಎನ್ನುವವರನ್ನು ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ.
ಇದೇ ವೇಳೆ ಸಾಮಾನ್ಯ ಜನಗಣತಿಯ ಜೊತೆಗೆ ಜಾತಿ ಜನಗಣತಿ ನಡೆಸಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ ಅವರು, ಎಲ್ಲಾ ಸಮುದಾಯಗಳ ನಾಯಕರು ಈ ಪ್ರಯತ್ನವನ್ನು ಬೆಂಬಲಿಸುವಂತೆ ಒತ್ತಾಯಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————