ದಾವಣಗೆರೆ: ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಎಂದು ಒಂದೆಡೆ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡುತ್ತಿದ್ದಾರೆ. ಇದೇ ಮಾದರಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೂಡ ಹೇಳಿಕೆ ನೀಡಿದ್ದು, ಚನ್ನಪಟ್ಟಣದಲ್ಲಿ ಯಾರೇ ಅಭ್ಯರ್ಥಿ ಯಾದರೂ ನಾನೇ ಎನ್ ಡಿಎ ಅಭ್ಯರ್ಥಿ ಎಂದು ಹೇಳಿಕೆ ನೀಡಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದರು.
ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಕೇಸ್ ವಾಪಸ್ ಪಡೆದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಕೇಸ್ ವಾಪಸ್ ಪಡೆದ ವಿಚಾರ ನೋಡಿದರೆ ರಾಜ್ಯ ಸರ್ಕಾರ ಗಲಭೆಕೋರರಿಗೆ ರಕ್ಷಣೆ ಕೊಡುತ್ತಿದೆ ಎಂದು ದೂರಿದರು.
ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ದೂರು ದಾಖಲಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನ್ನ ಮೇಲೆ ಅವರು ದೂರು ದಾಖಲು ಮಾಡಿದ್ದಾರೆ. ಅದಕ್ಕೆ ನಾನು ನ್ಯಾಯಾಲಯದಲ್ಲಿ ಉತ್ತರ ಕೊಡುತ್ತೇನೆ ಎಂದು ತಿಳಿಸಿದರು.
3–4 ಸಾವಿರ ಪುಟಗಳಷ್ಟು ಚಾರ್ಜ್ ಶೀಟ್ ಹಾಕುತ್ತಾರೆ. 12 ವರ್ಷದಿಂದ ನನ್ನ ಮೇಲೆ ಕೇಸ್ ಹಾಗೆ ಉಳಿಸಿಕೊಂಡಿದ್ದಾರೆ. ಈಗ ನನ್ನ ಮೇಲೆ ಕೇಸ್ ಹಾಕಿದ್ದಾರೆ ನ್ಯಾಯಾಲಯದಲ್ಲಿ ಎಲ್ಲ ಚರ್ಚೆ ಆಗಲಿ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296