ಕೇರಳದ ಕಣ್ಣೂರಿನ ದೇವಾಲಯದಲ್ಲಿ ನಟ ದರ್ಶನ್ ಇಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೇರಳದ ಕಣ್ಣೂರಿನ ಪ್ರಸಿದ್ಧ ಮಾಡಾಯಿಕಾವು ಶ್ರೀಭಗವತೀ ದೇವಸ್ಥಾನದಲ್ಲಿ ಇಂದು ಪುತ್ರ ವಿನೀಶ್, ಧನ್ವೀರ್ ಗೌಡ ಸೇರಿದಂತೆ ಹಲವಾರು ಸ್ನೇಹಿತರ ಜೊತೆಗೆ ದರ್ಶನ್ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಮಾಡಾಯಿಕಾವು ಶ್ರೀಭಗವತೀ ದೇವಾಲಯದಲ್ಲಿ ಪಾರ್ವತಿ ದೇವಿಯು ಭದ್ರಕಾಳಿ ಅವತಾರದಲ್ಲಿ ಸಂಚಾರ ಮಾಡುತ್ತಾಳೆ ಎಂಬ ಪ್ರತೀತಿ ಇದೆ. ಅಂದ ಹಾಗೆ ಈ ದೇವಾಲಯಕ್ಕೆ ಮಹಿಳೆಯರ ಪ್ರವೇಶ ನಿಷೇಧವಿದೆಯಂತೆ!
ದೇವಿಗೆ ಕಲಶಂ ಎನ್ನುವ ಪೂಜೆ ನಡೆಸುವಾಗ ಕೋಳಿಗಳನ್ನು ಬಲಿ ಕೊಡಲಾಗುತ್ತದೆ. ಇಲ್ಲಿ ಭಕ್ತರಿಗೆ ಪ್ರಸಾದವಾಗಿ ಕೋಳಿ ಮಾಂಸವನ್ನು ನೀಡಲಾಗುತ್ತದೆ. ಮಾಂಸಾಹಾರ ತಿನ್ನದವರಿಗೆ ಬೇಯಿಸಿದ ಹೆಸರು ಕಾಳು, ಅಕ್ಕಿ, ಬೆಲ್ಲದಿಂದ ಮಾಡಲಾದ ಪ್ರಸಾದವನ್ನು ನೀಡಲಾಗುತ್ತದೆ.
ಇನ್ನೂ ನಟ ದರ್ಶನ್ ದೇವಸ್ಥಾನಕ್ಕೆ ಭೇಟಿ ನೀಡಿರ ಶತ್ರು ಸಂಹಾರಕ್ಕೆ ಪೂಜೆ ಮಾಡಿಸಿದ್ದಾರೆ ಅಂತ ವಿವಿಧ ಸುದ್ದಿವಾಹಿನಿಗಳು ವರದಿ ಮಾಡಿವೆ. ಇದು ಎಷ್ಟು ಸತ್ಯವೋ, ಎಷ್ಟು ಸುಳ್ಳೋ ಎನ್ನುವುದು ತಿಳಿದು ಬಂದಿಲ್ಲ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4