ಬೆಂಗಳೂರು : ಬೆಂಗಳೂರು ಕಟ್ಟಡ ಕುಸಿತ ದುರಂತ ನಡೆದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಈ ಅವಘಡದಲ್ಲಿ 8 ಮಂದಿ ಮೃತಪಟ್ಟಿದ್ದಾರೆ. 8 ಮಂದಿಯನ್ನು ರಕ್ಷಿಸಲಾಗಿದೆ. ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುತ್ತೇವೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೃತದೇಹವನ್ನು ಅವರ ಜಾಗಗಳಿಗೆ ಕಳುಹಿಸಲಾಗುತ್ತದೆ. ಕಳಪೆ ಕಾಮಗಾರಿಯಿಂದ ಈ ಅವಘಡ ನಡೆದಿದೆ. ಎಕ್ಸಿಕ್ಯೂಟಿವ್ ಇಂಜಿನಿಯರ್ ಗಳಿಗೆ ನೋಟಿಸ್ ನೀಡಲಾಗಿದೆ ಎಂದರು.
ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಅ.22ರ ಸಂಜೆ ನಿರ್ಮಾಣ ಹಂತದ ಬೃಹತ್ ಕಟ್ಟಡ ಕುಸಿದುಬಿದ್ದು ದುರಂತ ಸಂಭವಿಸಿತ್ತು. ಅವಶೆಷಗಳಡಿಯಲ್ಲಿ ಸಿಲುಕಿದ್ದ 8 ಜನರ ಮೃತದೇಹವನ್ನು ಹೊರತೆಗೆಯಲಾಗಿದ್ದು, ಇಬ್ಬರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296