ಬೆಂಗಳೂರು: ಜಾತಿ ಗಣತಿ ವರದಿಯನ್ವಯ ರಾಜ್ಯದಲ್ಲಿ ಮುಸ್ಲಿಮರೇ ಅಧಿಕ ಸಂಖ್ಯೆಯಲ್ಲಿದ್ದಾರೆ ಎಂದಮೇಲೆ ಅವರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಏಕೆ ಬೇಕು? ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ.
ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಾತಿ ಗಣತಿ ವರದಿಯಲ್ಲಿರುವ ಜನಸಂಖ್ಯೆ ಅಂಕಿ–ಅಂಶಗಳು ನಿಜವೇ ಆದರೆ, ರಾಜ್ಯದಲ್ಲಿ ಮುಸ್ಲಿಮರೇ ಅಧಿಕ ಸಂಖ್ಯೆಯಲ್ಲಿದ್ದಾರೆ. ಹೀಗಿದ್ದಾಗ ಅವರಿಗೇಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕು ಎಂಬುದು ಅರ್ಥವಾಗುತ್ತಿಲ್ಲ ಎಂದರು.
ಈ ಕೂಡಲೇ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿರುವ ಅಲ್ಪಸಂಖ್ಯಾತ ಸ್ಥಾನಮಾನ ಹಿಂಪಡೆಯಬೇಕು ಎಂದು ಆರ್. ಅಶೋಕ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಜಾತಿಗಣತಿ ವರದಿ ಪ್ರಕಾರ ಮುಸಲ್ಮಾನರು ಅತಿ ಹೆಚ್ಚು ಸಂಖ್ಯೆಯಲ್ಲಿ ಇದ್ದಾರೆ ಎಂದರೆ ಅವರಿಗೆ ಅಲ್ಪಸಂಖ್ಯಾತರು ಎನ್ನುವುದೇಕೆ? ಜಾತಿಗಣತಿ ವರದಿ ಎನ್ನುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚುನಾವಣೆಯ ಗಿಮಿಕ್ ಅಷ್ಟೇ. ಮುಂದಿನ ಸಚಿವ ಸಂಪುಟದಲ್ಲಿ ಉಪಸಮಿತಿ ರಚಿಸಿ ಕೈ ತೊಳೆದುಕೊಳ್ಳುತ್ತಾರೆ ಎಂದು ಆರ್. ಅಶೋಕ್ ಇದೇ ವೇಳೆ ಅಭಿಪ್ರಾಯಪಟ್ಟರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW