ಹಿಂದೂಗಳಿಗೆ ಬಹಳ ಶ್ರೇಷ್ಠವಾದ ಹಾಗೂ ವಿಶೇಷವಾದ ಮಾಸ ಶ್ರಾವಣ ಮಾಸ ಆಗಿದೆ. ಈ ಮಾಸದಲ್ಲಿ ಹಬ್ಬಗಳು ಸಾಲು ಸಾಲಾಗಿ ಬರುತ್ತಿರುತ್ತದೆ. ಹಾಗಾಗಿ ಈ ಮಾಸದಲ್ಲಿ ಶಿವ, ಪಾರ್ವತಿ, ಲಕ್ಷ್ಮಿ, ವಿಷ್ಣು ಸೇರಿದಂತೆ ಅನೇಕ ದೇವಾನುದೇವತೆಗಳ ಪೂಜೆ ಮಾಡುತ್ತಾರೆ.
ಧಾರ್ಮಿಕ ಕಾರ್ಯಗಳಿಗೆ ಬಹಳ ಉತ್ತಮವಾದ ಮಾಸ ಇದಾಗಿದೆ. ಈ ಮಾಸದಲ್ಲಿ ಜಪ–ತಪ, ವ್ರತ–ನಿಯಮ, ಪೂಜೆ–ಪುರಾಣಶಾಸ್ತ್ರ, ಪ್ರವಚನ, ಭಜನೆ, ಕೀರ್ತನೆ, ಸತ್ಸಾಂಗ, ಪುಣ್ಯ ಕ್ಷೇತ್ರಗಳ ದರ್ಶನ, ಯಜ್ಞ–ಯಾಗ, ಹೋಮ—ಹವನಗಳು ಹೆಚ್ಚಾಗಿ ನಡೆಯುತ್ತದೆ.
ಯಾವುದೇ ಶುಭ ಕಾರ್ಯಗಳನ್ನು ಮಾಡಲು ಹಾಗೂ ಹೊಸ ಕೆಲಸಗಳನ್ನು ಆರಂಭಿಸಲು ಶ್ರಾವಣ ಬಹಳ ಪ್ರಶಸ್ತವಾಗಿದೆ.
ಈ ಮಾಸದಲ್ಲಿ ಪ್ರಕೃತಿಯಲ್ಲಿನ ಗಿಡಮರಗಳು ಚಿಗುರೊಡೆದು ಹಚ್ಚಹಸಿರಾಗಿ, ಹೂಗಳನ್ನು ಬಿಟ್ಟು ಬಣ್ಣಗಳಿಂದ ಕಂಗೊಳಿಸುತ್ತಾ ಸಂತಸದಿಂದ ಇರುತ್ತದೆ. ಹಾಗೇ ಪ್ರಾಣಿ ಪಕ್ಷಿಗಳು ಕೂಡ ಉಲ್ಲಾಸದಿಂದ ಇರುತ್ತದೆಯಂತೆ. ಇದನ್ನು ಕಂಡು ದೈವಾನುದೇವತೆಗಳು ಕೂಡ ಸಂಭ್ರಮ ಪಡುತ್ತಾರೆ ಅನ್ನೋ ನಂಬಿಕೆ ಇದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: