ನವದೆಹಲಿ: ಕ್ಯಾಮೆರಾಗಳ ಮುಂದೆ ಮಾತ್ರ ಏಕೆ ನಿಮ್ಮ ರಕ್ತ ಕುದಿಯುತ್ತಿದೆ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಪಾಕಿಸ್ತಾನದ ವಿರುದ್ಧದ ಮಿಲಿಟರಿ ಯುದ್ಧವನ್ನು ನಿಲ್ಲಿಸಲು ಒಪ್ಪುವ ಮೂಲಕ ಪ್ರಧಾನಿ ಮೋದಿ ಭಾರತದ ಪ್ರತಿಷ್ಠೆಯೊಂದಿಗೆ ರಾಜಿ ಮಾಡಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ರಾಜಸ್ಥಾನದ ಬಿಕಾನೇರ್ ನಲ್ಲಿ ನಡೆದ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಮೋದಿ ಭಾರತ ಮಾತೆಯ ಸೇವಕ ಅನ್ನೋದನ್ನ ಪಾಕಿಸ್ತಾನ ಮರೆತಿತ್ತು ಅನ್ನಿಸುತ್ತೆ. ನಾನು ಶಾಂತವಾಗಿದ್ದರೂ ನನ್ನ ರಕ್ತ ನಾಳಗಳಲ್ಲಿ ʻಸಿಂಧೂರʼ ಹರಿಯುತ್ತಲೇ ಇರುತ್ತದೆ ಎಂದು ಹೇಳಿದ್ದರು.
ಪ್ರಧಾನಿ ಮೋದಿ ಭಾಷಣದ ತುಣುಕೊಂದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ, ಮೂರು ಪ್ರಶ್ನೆಗಳನ್ನ ಮುಂದಿಟ್ಟಿದ್ದಾರೆ.
“ಮೋದಿ ಜೀ, ಪೊಳ್ಳು ಭಾಷಣ ಮಾಡುವುದನ್ನು ನಿಲ್ಲಿಸಿ. ಹೇಳಿ: ಭಯೋತ್ಪಾದನೆಯ ಕುರಿತು ಪಾಕಿಸ್ತಾನದ ಹೇಳಿಕೆಯನ್ನು ನೀವು ಏಕೆ ನಂಬಿದ್ದೀರಿ? ಟ್ರಂಪ್ ಗೆ ತಲೆಬಾಗುವ ಮೂಲಕ ನೀವು ಭಾರತದ ಹಿತಾಸಕ್ತಿಗಳನ್ನು ಏಕೆ ತ್ಯಾಗ ಮಾಡಿದ್ದೀರಿ? ಕ್ಯಾಮೆರಾಗಳ ಮುಂದೆ ಮಾತ್ರ ನಿಮ್ಮ ರಕ್ತ ಏಕೆ ಕುದಿಯುತ್ತಿದೆ? ನೀವು ಭಾರತದ ಪ್ರತಿಷ್ಠೆಯೊಂದಿಗೆ ರಾಜಿ ಮಾಡಿಕೊಂಡಿದ್ದೀರಿ!” ಎಂದು ರಾಹುಲ್ ಗಾಂಧಿ X ನಲ್ಲಿ ಪೋಸ್ಟ್ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW