ಬೆಂಗಳೂರು: 2002ರಲ್ಲಿ ಗುಜರಾತ್ ನಲ್ಲಿ ನಡೆದ ಗೋಧ್ರಾ ಗಲಭೆ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ರಾಜೀನಾಮೆ ಕೊಟ್ಟಿದ್ದರೆ, ಅವರು ಆಗಲೂ ಅಧಿಕಾರದ ಗದ್ದುಗೆಯಿಂದ ಕೆಳಗೆ ಇಳಿದರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮುಡಾ ಪ್ರಕರಣ ಸಂಬಂಧ ಸಿದ್ದರಾಮಯ್ಯನವರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸಿರುವ ಹಿನ್ನೆಲೆ ಸಿದ್ದರಾಮಯ್ಯ ವಿಪಕ್ಷಗಳಿಗೆ ತಿರುಗೇಟು ನೀಡಿದರು.
ನಾನು ರಾಜೀನಾಮೆ ನೀಡುವ ಪ್ರಮೇಯವೇ ಇಲ್ಲ. ನಾನು ಏನು ತಪ್ಪು ಮಾಡಿದ್ದೇನೆ ಎಂದು ರಾಜೀನಾಮೆ ಕೊಡಬೇಕು. ಗೋಧ್ರಾ ಗಲಭೆಯಲ್ಲಿ ನೂರಾರು ಜನ ಸಾವನ್ನಪ್ಪಿದ್ದರು. ನರೇಂದ್ರ ಮೋದಿ ಅವರ ವಿರುದ್ಧ ಎಫ್ ಐಆರ್ ಸಹ ದಾಖಲಾಗಿತ್ತು. ಆದರೆ, ಆ ಸಂದರ್ಭದಲ್ಲಿ ಮೋದಿ ರಾಜೀನಾಮೆ ಕೊಟ್ಟಿರಲಿಲ್ಲ ಎಂದು ಹೇಳಿದ್ದಾರೆ.
ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ಆದರೆ, ಕೇಂದ್ರ ಸಚಿವರಾಗಿ ಮೋದಿ ನೇತೃತ್ವದ ಸರ್ಕಾರದಲ್ಲಿ ಗುರುತಿಸಿಕೊಂಡಿದ್ದಾರೆ. ಕುಮಾರಸ್ವಾಮಿ ರಾಜೀನಾಮೆ ಕೊಟ್ಟಿದ್ದಾರಾ, ಅವರಿಂದ ಮುಜುಗರ ಆಗುತ್ತಿಲ್ಲವೇ. ಕುಮಾರಸ್ವಾಮಿ ಅವರು ಮೊದಲು ರಾಜೀನಾಮೆ ನೀಡಲಿ, ಮುಜುಗರ ಆಗುವುದಿದ್ದರೆ ಅವರೇಕೆ ರಾಜೀನಾಮೆ ಕೊಡಬಾರದು ಎಂದೂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296