ನವದೆಹಲಿ: ಕಮಲ್ ಹಾಸನ್ ಚಿತ್ರ `ಥಗ್ ಲೈಫ್’ ಬಿಡುಗಡೆ ವಿಚಾರದಲ್ಲಿ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರ ಮತ್ತು ರಾಜ್ಯ ಚಲನಚಿತ್ರ ಮಂಡಳಿಯನ್ನು ತರಾಟೆಗೆತ್ತಿಕೊಂಡಿದೆ.
ಚಿತ್ರದ ಮೇಲೆ ಯಾವುದೇ ನಿರ್ಬಂಧ ಹೇರಿಲ್ಲ. ನಿರ್ಮಾಪಕರು ಸಿನಿಮಾ ಬಿಡುಗಡೆ ಮಾಡಲು ಮನಸ್ಸು ಮಾಡಿದರೆ ಸಂಪೂರ್ಣ ಭದ್ರತೆಯನ್ನು ಒದಗಿಸುವುದಾಗಿ ರಾಜ್ಯ ಸರ್ಕಾರ ಸಲ್ಲಿಸಿದ ಅಫಿಡವಿಟ್ ಅನ್ನು ದಾಖಲಿಸಿಕೊಂಡ ನ್ಯಾಯಾಲಯ, ಬೆದರಿಕೆ ಹಾಕಿದವರ ವಿರುದ್ಧ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿತು.
ದ್ವೇಷ ಭಾಷಣ ಮತ್ತು ಹಿಂಸಾಚಾರದ ಬೆದರಿಕೆಗಳ ಕುರಿತು ಮಾರ್ಗಸೂಚಿಗಳನ್ನು ಕೋರಿ ನಿರ್ಮಾಪಕ ಮತ್ತು ಮೂರನೇ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ನಡೆಸಿದ ಪೀಠವು, ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆ ಎಂದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW