nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026
    Facebook Twitter Instagram
    ಟ್ರೆಂಡಿಂಗ್
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    • ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳಾ ದೌರ್ಜನ್ಯ ತಡೆಗಟ್ಟಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು: ಡಾ.ನಾಗಲಕ್ಷ್ಮೀ ಚೌಧರಿ
    ರಾಜ್ಯ ಸುದ್ದಿ March 17, 2024

    ಮಹಿಳಾ ದೌರ್ಜನ್ಯ ತಡೆಗಟ್ಟಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು: ಡಾ.ನಾಗಲಕ್ಷ್ಮೀ ಚೌಧರಿ

    By adminMarch 17, 2024No Comments2 Mins Read
    mahila

    ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಸಹಾಯವಾಣಿ ಸಂಖ್ಯೆ ಪೋಸ್ಟರ್, ಜಾಗೃತಿ ಕಾರ್ಯಕ್ರಮಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಮಾ.16) ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.


    Provided by
    Provided by

    ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳಬೇಕು. 2023-24 ನೇ ಸಾಲಿನಲ್ಲಿ ಸವದತ್ತಿ, ಬೈಲಹೊಂಗಲ ತಾಲೂಕಿನಲ್ಲಿರುವ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡು ಬಂದಿವೆ. ಇವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿ 3 ತಿಂಗಳಿಗೊಂದು ತಾಲೂಕಾ ಮಟ್ಟದ ಸಭೆ ಕರೆದು ಜಾಗೃತಿಗಳನ್ನು ಮೂಡಿಸಬೇಕು ಎಂದು ಹೇಳಿದರು.

    ಸವದತ್ತಿ, ಗೋಕಾಕ್, ರಾಮದುರ್ಗ ತಾಲೂಕಿನ ಅತೀ ಹೆಚ್ಚು ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದಿವೆ ಹಾಗಾಗಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳು ಆಯೋಜನೆ ಮಾಡಬೇಕು ಮತ್ತು ಅದಕ್ಕೆ ಪೂರಕವಾದ ದಾಖಲೆಗಳನ್ನು ಸಂಗ್ರಹಿಸಬೇಕು ಎಂದು ತಿಳಿಸಿದರು.

    ಪ್ರತಿ ಅಂಗನವಾಡಿ ಕೇಂದ್ರ, ಶಾಲಾ ಕಾಲೇಜುಗಳಲ್ಲಿ ಬಾಲ್ಯ ವಿವಾಹ ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸಬೇಕು. ಸಖಿ ಒನ್ ಸ್ಟಾಪ್ 1098 ಸಹಾಯವಾಣಿ ಸಂಪರ್ಕ 24*7 ನಿರಂತರ ಚಾಲನೆಯಲ್ಲಿರಬೇಕು. ಸಖಿ ಸಹಾಯವಾಣಿ ಕೇಂದ್ರಗಳ ಸಿಬ್ಬಂದಿಗಳಿಗೆ ಕಳೆದ 6 ತಿಂಗಳಿಗೆ ವೇತನ ಪಾವತಿಸುವ ತೊಂದರೆಯಾಗುತ್ತಿದೆ. ಕೂಡಲೇ ಇದನ್ನು ಸಂಬಂಧಿಸಿದ ಸಚಿವರ ಗಮನಕ್ಕೆ ತಂದು ವೇತನ ಪಾವತಿಗೆ ಕ್ರಮ ವಹಿಸಲಾಗುವುದು ಎಂದರು.

    ಉಜ್ವಲ ಮಹಿಳಾ ಸಂರಕ್ಷಣೆ ಕೇಂದ್ರಗಳಲ್ಲಿ ಇತರೆ ರಾಜ್ಯಗಳಿಂದ ಬಂದಂತಹ ಮಹಿಳೆಯರನ್ನು ರಕ್ಷಣೆ ಮಾಡಿ ಅವರಿಗೆ ಆಶ್ರಯ ನೀಡಲಾಗುತ್ತಿದೆ. ಹಣದ ಆಮಿಷದಿಂದ ಗಡಿ ಭಾಗದಲ್ಲಿನ ಹೆಚ್ಚಿನ ಮಹಿಳೆಯರು ಕಾಣೆಯಾಗಿರುವುದು ಕಂಡು ಬರುತ್ತದೆ. ಇದರ ಬಗ್ಗೆ ಜಿಲ್ಲಾಡಳಿತ ವರದಿ ಕೊಡಬೇಕು.

    ಜಿಲ್ಲಾಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಾಗೃತಿ ಕಾರ್ಯಕ್ರಮಗಳು ಆಗಿರುವ ಕುರಿತು ದಾಖಲೆಗಳನ್ನು ನೀಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ತಿಳಿಸಿದರು.

    ಜಿಲ್ಲೆಯ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮಹಿಳೆ ಮತ್ತು ಮಕ್ಕಳ ರಕ್ಷಣೆಗಾಗಿ ಕಾವಲು ಸಮಿತಿಗಳನ್ನು ರಚಿಸಲಾಗಿದೆ. ಮಹಿಳೆಯರ ದೌರ್ಜನ್ಯ, ಬಾಲ್ಯವಿವಾಹ, ಪೋಕ್ಸೋ ಪ್ರಕರಣಗಳನ್ನು ತಡೆಗಟ್ಟಲು ಕಟ್ಟುನಿಟ್ಟಾಗಿ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿರುವ ವಸತಿ ನಿಲಯಗಳಲ್ಲಿ ಮಕ್ಕಳಿಗೆ ಜಾಗೃತಿ ಕಾರ್ಯಕ್ರಮಗಳ ಜೊತೆಗೆ ರಕ್ಷಣಾತ್ಮಕ ತರಬೇತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ.

    ರೈಲ್ವೆ ಸ್ಟೇಷನ್, ಬಸ್ ನಿಲ್ದಾಣ, ಗಡಿ ಪ್ರದೇಶದಲ್ಲಿ, ಜನ ಹೆಚ್ಚಾಗಿ ಇರುವ ಪ್ರದೇಶಗಳಲ್ಲಿ ಕೂಡ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಎಸ್.ಪಿ ಭೀಮಾಶಂಕರ ಗುಳೇದ ಅವರು ತಿಳಿಸಿದರು.

    ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರನ್ನು ಜಿಲ್ಲೆಯ ಮೂರು ಸೇವಾ ಕೇಂದ್ರಗಳಲ್ಲಿ ಆಶ್ರಯ ನೀಡಲಾಗುತ್ತಿದೆ. ಮೂರು ಸಂಸ್ಥೆಗಳ ನಿರ್ವಹಣೆಗೆ ಸರ್ಕಾರದಿಂದ ಅನುದಾನ ಒದಗಿಸಲಾಗುತ್ತಿದೆ ಎಂದು ಸಂಬಂಧಿಸಿದ ಅಧಿಕಾರಿಗಳು ತಿಳಿಸಿದರು.

    ಜಿಲ್ಲೆಯಲ್ಲಿರುವ ಸಾಂತ್ವನ ಕೇಂದ್ರಗಳಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಅನುದಾನ ನೀಡಲಾಗುತ್ತಿದೆ. ವಿವಿಧ ಇಲಾಖೆಯ ಸಹಯಗದೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ಸಾಂತ್ವಾನ ಕೇಂದ್ರದ ಸಮಾಲೋಚಕಿ ಲಲಿತಾ ಅವರು ಹೇಳಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ, ಎಸಿಪಿ ಸದಾಶಿವ ಕಟ್ಟಿಮನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆರ್ ನಾಗರಾಜ, ವಿವಿಧ ಸಾಂತ್ವಾನ ಕೇಂದ್ರದ ಸಂಯೋಜಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬೆಂಗಳೂರು: ಹಾಸನ ಜಿಲ್ಲೆಯ ಯಸಳೂರು ವಲಯದಲ್ಲಿ 2023 ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರ,…

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.