ಮಂಡ್ಯ: ಪತಿಯು ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಮಂಡ್ಯ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಲೋಕೇಶ್ ಪತ್ನಿ ಶ್ವೇತಾ (36) ಕೊಲೆಯಾದ ಮಹಿಳೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಮಂಗಳವಾರ ತಡರಾತ್ರಿ ದಂಪತಿ ನಡುವೆ ಜಗಳ ಉಂಟಾಗಿ ಲೋಕೇಶ್ ತನ್ನ ಪತ್ನಿ ಶ್ವೇತಾಳನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾನೆ.
ಘಟನೆ ಹಿನ್ನೆಲೆಯಲ್ಲಿ ಮಂಡ್ಯ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC