ಥಾಣೆ: ಪತಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಸಂದರ್ಭದಲ್ಲಿ ತಡೆಯುವುದು ಬಿಟ್ಟು, ಪತ್ನಿಯೊಬ್ಬಳು ಆತ ಸಾಯುತ್ತಿರುವ ದೃಶ್ಯವನ್ನು ವಿಡಿಯೋ ಮಾಡಿಕೊಂಡಿರುವ ವಿಲಕ್ಷಣ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ಸದ್ಯ ಘಟನೆಗೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಯುವತಿ ವಿರುದ್ಧ ಥಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಾಗ್ಲೆ ಎಸ್ಟೇಟ್ನಲ್ಲಿ ವಾಸಿಸುವ ದಂಪತಿಗಳ ನಡುವೆ ಕೌಟುಂಬಿಕ ಕಲಹವಿದ್ದು, ಆಗಾಗ್ಗೆ ಜಗಳವಾಡುತ್ತಿದ್ದರು. ನವೆಂಬರ್ 20 ರಂದು ಈ ಘಟನೆ ನಡೆದಿದ್ದು, 29 ವರ್ಷ ವಯಸ್ಸಿನ ವ್ಯಕ್ತಿ ತನ್ನ ಮನೆಯಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವಾಗ್ಗೆ ಎಸ್ಟೇಟ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಘಟನೆ ನಡೆದಾಗ ಆತನ ಪತ್ನಿ ಅಲ್ಲಿಯೇ ಇದ್ದಳು ಮತ್ತು ವ್ಯಕ್ತಿ ನೇಣು ಹಾಕಿಕೊಂಡಾಗ ಇಡೀ ಘಟನೆಯನ್ನು ಕ್ಯಾಮೆರಾದಲ್ಲಿ ದಾಖಲಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮೃತನ ತಾಯಿ ಶುಕ್ರವಾರ ಪೊಲೀಸರಿಗೆ ದೂರು ನೀಡಿದ್ದು, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105(ಕೊಲೆಯಲ್ಲದ ಅಪರಾಧಿ ನರಹತ್ಯೆಗೆ ಶಿಕ್ಷೆ) ಮತ್ತು 108(ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296