ಬೆಂಗಳೂರು: ವಿವಾಹ ವಿಚ್ಛೇದನದ ಅರ್ಜಿ ವಾಪಸ್ ಪಡೆಯಲು ಪತ್ನಿ ನಿರಾಕರಿಸಿದ ಹಿನ್ನೆಲೆ ವ್ಯಕ್ತಿಯೊಬ್ಬ ಪತ್ನಿಯ ಮನೆಯ ಮುಂಭಾಗದಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ನಗರದ ನಾಗರಭಾವಿ ಬಡಾವಣೆಯಲ್ಲಿ ಗುರುವಾರ ಈ ಘಟನೆ ನಡೆದಿದೆ. ಮೃತರನ್ನು ಕುಣಿಗಲ್ ಪಟ್ಟಣದ ನಿವಾಸಿ 39 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದೆ.
ಮಂಜುನಾಥ್ 2013ರಲ್ಲಿ ವಿವಾಹವಾಗಿದ್ದರು ಮತ್ತು ನಂತರ ಬೆಂಗಳೂರಿನ ಫ್ಲ್ಯಾಟ್ ನಲ್ಲಿ ವಾಸಿಸುತ್ತಿದ್ದರು. ದಂಪತಿಗೆ 9 ವರ್ಷದ ಗಂಡು ಮಗುವಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಂಪತಿ ನಡುವೆ ಭಿನ್ನಾಭಿಪ್ರಾಯ ಮೂಡಿದ್ದರಿಂದ ಮಂಜುನಾಥ್ ಎರಡು ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸಲು ಆರಂಭಿಸಿದ್ದರು. ಇಬ್ಬರೂ ವಿಚ್ಛೇದನ ಪಡೆಯಲು ನ್ಯಾಯಾಲಯ ಮೆಟ್ಟಿಲೇರಿದ್ದರು. ಈ ಮಧ್ಯೆ, ವಿಚ್ಛೇದನ ಅರ್ಜಿಯನ್ನು ಹಿಂಪಡೆಯುವಂತೆ ಮಂಜುನಾಥ್ ಪತ್ನಿ ಬಳಿ ಕೇಳಿದ್ದರು. ಅದೇ ವಿಚಾರವಾಗಿ ಮನವೊಲಿಸಲು ಪತ್ನಿಯ ನಿವಾಸಕ್ಕೆ ಬಂದಿದ್ದರು. ಅರ್ಜಿ ಹಿಂಪಡೆಯಲು ಪತ್ನಿ ನಿರಾಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4