ಪತಿ ಮೇಕೆ ಮೇಯಿಸುತ್ತಾ ರೈಲ್ವೇ ಹಳಿ ಮೇಲೆ ನಿಂತಿದ್ದ ವೇಳೆ ಏಕಾಏಕಿ ರೈಲು ಬಂದಿದ್ದು, ಈ ವೇಳೆ ಪತಿಯನ್ನು ರಕ್ಷಿಸಲು ಬಂದ ಪತ್ನಿಯೂ ರೈಲಿಗೆ ಸಿಕ್ಕಿ ಮೃತಪಟ್ಟಿರುವ ಘಟನೆ ಇಲ್ಲಿನ ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಚಂದ್ರನಾಯಕ್(56) ಮತ್ತು ಜಯಬಾಯಿ(45) ಮೃತಪಟ್ಟ ದಂಪತಿ ಎಂದು ಗುರುತಿಸಲಾಗಿದೆ. ದೊಡ್ಡಬಳ್ಳಾಪುರದ ಮೂಲದ ನಿವಾಸಿಗಳಾದ ದಂಪತಿ ಶುಕ್ರವಾರ ಸಂಜೆ 3:40ರ ಸುಮಾರಿನಲ್ಲಿ ವಡ್ಡರಹಳ್ಳಿ–ಮಾಕಳಿ ದುರ್ಗ ರೈಲ್ವೆ ನಿಲ್ದಾಣಗಳ ಮಧ್ಯೆ ಇರುವ ತಮ್ಮ ಜಮೀನಿನ ಬಳಿಯ ರೈಲ್ವೆ ಹಳಿ ಬಳಿ ಮೇಕೆಗಳನ್ನು ಮೇಯಿಸುತ್ತಿದ್ದರು ಎನ್ನಲಾಗಿದೆ.
ಆ ವೇಳೆ ಚಂದ್ರನಾಯಕ್ ರೈಲ್ವೆ ಹಳಿ ಮೇಲೆ ನಿಂತಿದ್ದರು. ರೈಲು ಬರುತ್ತಿರುವುದನ್ನು ಗಮನಿಸಿದ ಪತ್ನಿ ಜಯಬಾಯಿ ರಕ್ಷಣೆಗೆ ಹೋದಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಸಂಬಂಧ ಯಶವಂತಪುರ ರೈಲ್ವೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


