ಮಹಿಳೆಯೊಬ್ಬಳು ತನ್ನ ಪತಿಗೆ ದಿನದಲ್ಲಿ ಮೂರು ಬಾರಿ 10ರಿಂದ 15 ನಿಮಿಷಗಳ ಕಾಲ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿದ್ದು, ಆಕೆಯ ಆಸೆ ಪೂರೈಸಲು ಅಸಮರ್ಥನಾದ ಪತಿ, ಇದೀಗ ಡಿವೋರ್ಸ್ ಗಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದಾನೆ.
ಪತ್ನಿ ಮೊಬೈಲ್‍ನಲ್ಲಿ ಪೋರ್ನ್ ವಿಡಿಯೋ ನೋಡುವ ಚಟ ಹೊಂದಿದ್ದಾಳೆ ಎಂದು ಪಂಜಾಬ್ ಹರಿಯಾಣ ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ಆತ ಹೇಳಿದ್ದಾನೆ. ಅಲ್ಲದೇ ಪತ್ನಿ ತನ್ನ ಆಸೆ ಪೂರೈಸಲು ಅಸಮರ್ಥನಾದರೆ ತನ್ನನ್ನು ನಪುಂಸಕ ಎಂದು ಪತ್ನಿ ಹೀಯಾಳಿಸುತ್ತಾಳೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾನೆ.
ಪತ್ನಿಯು ಪತಿಯ ತಾಯಿಯನ್ನು ಕೂಡ ನಿಂದಿಸಿದ್ದು, ಎಂತಹ ನಪುಂಸಕನಿಗೆ ಜನ್ಮ ನೀಡಿದ್ದೀಯಾ ಎಂದು ಕರೆದಿದ್ದಾಳೆ ಎಂದು ತಾಯಿ ಆರೋಪಿಸಿದ್ದಾರೆ.
ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ನ್ಯಾಯಮೂರ್ತಿಗಳಾದ ಸುಧೀರ್ ಸಿಂಗ್ ಮತ್ತು ನ್ಯಾಯಮೂರ್ತಿ ಜಸ್ಜಿತ್ ಸಿಂಗ್ ಬೇಡಿ ಅವರ ನ್ಯಾಯಪೀಠವು ವಿಚ್ಛೇದನ ಪ್ರಕರಣದ ವಿಚಾರಣೆ ನಡೆಸಿದೆ.
ಈ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೆಂಡತಿ ತನ್ನ ಗಂಡನನ್ನು ನಪುಂಸಕ ಎಂದು ಕರೆದರೆ ಅದು ಮಾನಸಿಕ ಕ್ರೌರ್ಯಕ್ಕೆ ಸಮನಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.
ಈಗ ಪಂಜಾಬ್ ಹರಿಯಾಣ ಹೈಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಿ ಕಳೆದ 6 ವರ್ಷಗಳಿಂದ ಗಂಡ ಮತ್ತು ಹೆಂಡತಿ ಪ್ರತ್ಯೇಕವಾಗಿ ವಾಸಿಸುತ್ತಿರುವ ಕಾರಣ ಅವರನ್ನು ಒಂದಾಗಿಸುವುದು ಅಸಾಧ್ಯ. ಅಂತಹ ಪರಿಸ್ಥಿತಿಯಲ್ಲಿ, ಹೆಂಡತಿಯ ಮೇಲ್ಮನವಿಯನ್ನು ವಜಾಗೊಳಿಸಲಾಗುತ್ತದೆ ಮತ್ತು ಕುಟುಂಬ ನ್ಯಾಯಾಲಯದ ನಿರ್ಧಾರವನ್ನು ಎತ್ತಿಹಿಡಿಯಲಾಗುತ್ತದೆ ಎಂದು ಹೈಕೋರ್ಟ್ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296