nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಪೋಟಕ ವರದಿ: ಹೊಳೆನರಸೀಪುರದಲ್ಲಿ ‘ರಸ್ತೆ ಬಂದ್’ ರಾಜಕೀಯ — ಜೆಡಿಎಸ್ ಸಾಮ್ರಾಜ್ಯಕ್ಕೆ ಸ್ವಯಂಕೃತ ಕಂಠಕ!

    September 5, 2026

    ಬೀದರ್: 40 ವರ್ಷಗಳ ಬಳಿಕ ಬೆಳಕುಣಿ (ಚೌದ್ರಿ) ಗ್ರಾಮದಲ್ಲಿ ಆರಂಭವಾಯಿತು ಅಭಿವೃದ್ಧಿ ಕಾಮಗಾರಿ; ಪಿಡಿಒ ಕಾರ್ಯಕ್ಕೆ ಶ್ಲಾಘನೆ

    September 5, 2026

    ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

    September 5, 2026
    Facebook Twitter Instagram
    ಟ್ರೆಂಡಿಂಗ್
    • ಸ್ಪೋಟಕ ವರದಿ: ಹೊಳೆನರಸೀಪುರದಲ್ಲಿ ‘ರಸ್ತೆ ಬಂದ್’ ರಾಜಕೀಯ — ಜೆಡಿಎಸ್ ಸಾಮ್ರಾಜ್ಯಕ್ಕೆ ಸ್ವಯಂಕೃತ ಕಂಠಕ!
    • ಬೀದರ್: 40 ವರ್ಷಗಳ ಬಳಿಕ ಬೆಳಕುಣಿ (ಚೌದ್ರಿ) ಗ್ರಾಮದಲ್ಲಿ ಆರಂಭವಾಯಿತು ಅಭಿವೃದ್ಧಿ ಕಾಮಗಾರಿ; ಪಿಡಿಒ ಕಾರ್ಯಕ್ಕೆ ಶ್ಲಾಘನೆ
    • ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
    • ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ
    • ತುಮಕೂರು: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ತುಮಕೂರು:  ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ
    • ಬಳ್ಳಾರಿ: ಗ್ರಾಮ ಒನ್ ಫ್ರಾಂಚೈಸಿ ನೇಮಕಾತಿಗೆ ಅರ್ಜಿ ಆಹ್ವಾನ
    • ತಿಪಟೂರು ಬಿಜೆಪಿ ಟಿಕೆಟ್ ವಿಚಾರ ಪ್ರಸ್ತಾಪ ಅಪ್ರಸ್ತುತ: ಶ್ರೀ ರುದ್ರಮುನಿಸ್ವಾಮೀಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಕೊಟ್ಟಿಗೆಗೆ ನುಗ್ಗಿ ಕಾಡು ಪ್ರಾಣಿ ದಾಳಿ: 6 ಕುರಿ ಬಲಿ, 12 ಕುರಿಗಳಿಗೆ ಗಂಭೀರ ಗಾಯ
    ಜಿಲ್ಲಾ ಸುದ್ದಿ August 1, 2026

    ಸರಗೂರು: ಕೊಟ್ಟಿಗೆಗೆ ನುಗ್ಗಿ ಕಾಡು ಪ್ರಾಣಿ ದಾಳಿ: 6 ಕುರಿ ಬಲಿ, 12 ಕುರಿಗಳಿಗೆ ಗಂಭೀರ ಗಾಯ

    By Ganesh TumkuruAugust 1, 2026No Comments2 Mins Read
    kottegala.jpg

    ಸರಗೂರು: ತಾಲೂಕಿನ ಕೊತ್ತೇಗಾಲ ಗ್ರಾಮದಲ್ಲಿ ಮಧ್ಯರಾತ್ರಿ ಕಾಡು ಪ್ರಾಣಿಯೊಂದು ಕುರಿಗಳ ಕೊಟ್ಟಿಗೆಗೆ ನುಗ್ಗಿ ರಕ್ತಪಾತ ಹರಿಸಿದ ಪರಿಣಾಮ 6 ಕುರಿಗಳು ಸ್ಥಳದಲ್ಲೇ ಮೃತಪಟ್ಟು, 12 ಕುರಿಗಳು ತೀವ್ರವಾಗಿ ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ. ಈ ಘಟನೆಯಿಂದ ಗ್ರಾಮಸ್ಥರಲ್ಲಿ ತೀವ್ರ ಭಯ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ.

    ಗ್ರಾಮದ ನಿವಾಸಿ ಚಲುವಮ್ಮ ಎಂಬುವರಿಗೆ ಸೇರಿದ 20 ಕುರಿಗಳನ್ನು ಎಂದಿನಂತೆ ಗುರುವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಲಾಗಿತ್ತು. ಮಧ್ಯರಾತ್ರಿಯ ವೇಳೆ ಕಾಡಿನಿಂದ ಬಂದಿರುವ ಶಂಕಿತ ಚಿರತೆ ಅಥವಾ ಮತ್ತಾವುದೋ ಕಾಡು ಪ್ರಾಣಿ ಏಕಾಏಕಿ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ಹೆದರಿದ ಕುರಿಗಳು ಚದುರಿ ಓಡಾಡಿದ್ದು, ಶುಕ್ರವಾರ ಬೆಳಿಗ್ಗೆ ಕುಟುಂಬದವರು ನೋಡಿದಾಗ ಕೊಟ್ಟಿಗೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಕುರಿಗಳ ದೃಶ್ಯ ಕಂಡು ಆಘಾತಕ್ಕೊಳಗಾಗಿದ್ದಾರೆ.

    ಸ್ಥಳದಲ್ಲೇ 6 ಕುರಿ ಸಾವು:

    ದಾಳಿಯ ತೀವ್ರತೆಗೆ 6 ಕುರಿಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ, 12 ಕುರಿಗಳ ಕುತ್ತಿಗೆ, ಹೊಟ್ಟೆ ಹಾಗೂ ಕಾಲುಗಳಿಗೆ ತೀವ್ರ ಗಾಯಗಳಾಗಿವೆ. ವಿಷಯ ತಿಳಿದ ಪಶು ಸಂಗೋಪನಾ ಇಲಾಖೆಯ ವೈದ್ಯಾಧಿಕಾರಿ ಡಾ. ಮಹೇಶ್ ಅವರು ಸ್ಥಳಕ್ಕೆ ಭೇಟಿ ನೀಡಿ ಗಾಯಗೊಂಡ ಕುರಿಗಳಿಗೆ ತುರ್ತು ಚಿಕಿತ್ಸೆ ನೀಡಿದ್ದಾರೆ. ಕೆಲ ಕುರಿಗಳ ಸ್ಥಿತಿ ಇನ್ನು ಚಿಂತಾಜನಕವಾಗಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿವೆ. ಕೇವಲ ಎರಡು ಕುರಿಗಳು ಮಾತ್ರ ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿವೆ.
    ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸ್ ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್, ಅಂತರಸಂತೆ ಉಪ ನಿರೀಕ್ಷಕ ಚಂದ್ರಹಾಸ, ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ (RFO) ಲೋಕೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತಪಟ್ಟ ಕುರಿಗಳ ಮರಣೋತ್ತರ ಪರೀಕ್ಷೆಯನ್ನು ಸ್ಥಳದಲ್ಲೇ ನಡೆಸಿ ಪಂಚನಾಮೆ ಪೂರ್ಣಗೊಳಿಸಲಾಯಿತು.

    ಅರಣ್ಯ ಇಲಾಖೆ ಸ್ಪಷ್ಟನೆ:

    “ಘಟನೆಯ ಕುರಿತು ಸಮಗ್ರ ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಗುವುದು. ಸರ್ಕಾರದ ನಿಯಮಾನುಸಾರ ರೈತರಿಗೆ ಸೂಕ್ತ ಪರಿಹಾರ ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತದೆ. ಗ್ರಾಮದಲ್ಲಿ ಕಾಡು ಪ್ರಾಣಿಗಳ ಸಂಚಾರದ ಬಗ್ಗೆ ನಿಗಾ ವಹಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗುವುದು” ಎಂದು ವಲಯ ಅರಣ್ಯಾಧಿಕಾರಿ ಲೋಕೇಶ್ ತಿಳಿಸಿದ್ದಾರೆ.

    “ನಮ್ಮ ಇಡೀ ಕುಟುಂಬ ಈ ಕುರಿಗಳನ್ನು ನೆಚ್ಚಿಕೊಂಡೇ ಜೀವನ ಸಾಗಿಸುತ್ತಿತ್ತು. ಈಗ ದಾಳಿಯಿಂದ ಅಪಾರ ಆರ್ಥಿಕ ನಷ್ಟ ಉಂಟಾಗಿದ್ದು, ಜೀವನೋಪಾಯವೇ ಇಲ್ಲದಂತಾಗಿದೆ. ಸರ್ಕಾರ ಮತ್ತು ಅರಣ್ಯ ಇಲಾಖೆ ಕೂಡಲೇ ನಮಗೆ ಸೂಕ್ತ ಪರಿಹಾರ ಒದಗಿಸಬೇಕು,” ಎಂದು ಬಾಧಿತ ರೈತೆ ಚಲುವಮ್ಮ ಕಣ್ಣೀರಿಟ್ಟು ಮನವಿ ಮಾಡಿದ್ದಾರೆ.

    ಕಳೆದ ಕೆಲವು ದಿನಗಳಿಂದ ಗ್ರಾಮದ ಸುತ್ತಮುತ್ತ ಕಾಡು ಪ್ರಾಣಿಗಳ ಓಡಾಟ ಹೆಚ್ಚಾಗಿದ್ದು, ರಾತ್ರಿ ವೇಳೆ ಜಾನುವಾರುಗಳನ್ನು ರಕ್ಷಿಸುವುದು ಕಷ್ಟಕರವಾಗಿದೆ. ಅರಣ್ಯ ಇಲಾಖೆ ಕೂಡಲೇ ಗಸ್ತು ಹೆಚ್ಚಿಸಿ ಕಾಡು ಪ್ರಾಣಿಯನ್ನು ಸೆರೆಹಿಡಿಯಬೇಕು ಅಥವಾ ಕಾಡಿನೊಳಗೆ ಓಡಿಸುವ ಕ್ರಮ ಕೈಗೊಳ್ಳಬೇಕು ಎಂದು ಕೊತ್ತೇಗಾಲ ಗ್ರಾಮಸ್ಥರು ತೀವ್ರವಾಗಿ ಒತ್ತಾಯಿಸಿದ್ದಾರೆ.
    ಈ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿಗಳಾದ ಶೋಭಾ, ಇಮ್ರಾನ್ ಅಹಮದ್, ದೇವರಾಜು, ಕೃಷ್ಣಯ್ಯ, ಶಿವಪ್ಪ, ಜಗದೀಶ್ ಹಾಗೂ ಗ್ರಾಮದ ಮುಖಂಡರಾದ ಚಲುವಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ಸ್ಪೋಟಕ ವರದಿ: ಹೊಳೆನರಸೀಪುರದಲ್ಲಿ ‘ರಸ್ತೆ ಬಂದ್’ ರಾಜಕೀಯ — ಜೆಡಿಎಸ್ ಸಾಮ್ರಾಜ್ಯಕ್ಕೆ ಸ್ವಯಂಕೃತ ಕಂಠಕ!

    September 5, 2026

    ಬೀದರ್: 40 ವರ್ಷಗಳ ಬಳಿಕ ಬೆಳಕುಣಿ (ಚೌದ್ರಿ) ಗ್ರಾಮದಲ್ಲಿ ಆರಂಭವಾಯಿತು ಅಭಿವೃದ್ಧಿ ಕಾಮಗಾರಿ; ಪಿಡಿಒ ಕಾರ್ಯಕ್ಕೆ ಶ್ಲಾಘನೆ

    September 5, 2026

    ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

    September 5, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸ್ಪೋಟಕ ವರದಿ: ಹೊಳೆನರಸೀಪುರದಲ್ಲಿ ‘ರಸ್ತೆ ಬಂದ್’ ರಾಜಕೀಯ — ಜೆಡಿಎಸ್ ಸಾಮ್ರಾಜ್ಯಕ್ಕೆ ಸ್ವಯಂಕೃತ ಕಂಠಕ!

    September 5, 2026

    ಹೊಳೆನರಸೀಪುರ: ಅಧಿಕಾರದ ಮದ, ಕಾನೂನು ಉಲ್ಲಂಘನೆ ಮತ್ತು ಅಧಿಕಾರಿಗಳ ದುರುಪಯೋಗ — ಹೊಳೆನರಸೀಪುರದ ತಾಲ್ಲೂಕು ಕಚೇರಿ ಮುಂಭಾಗದ ಸಾರ್ವಜನಿಕ ರಸ್ತೆ…

    ಬೀದರ್: 40 ವರ್ಷಗಳ ಬಳಿಕ ಬೆಳಕುಣಿ (ಚೌದ್ರಿ) ಗ್ರಾಮದಲ್ಲಿ ಆರಂಭವಾಯಿತು ಅಭಿವೃದ್ಧಿ ಕಾಮಗಾರಿ; ಪಿಡಿಒ ಕಾರ್ಯಕ್ಕೆ ಶ್ಲಾಘನೆ

    September 5, 2026

    ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

    September 5, 2026

    ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ

    September 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.