ಮೈಸೂರು: ಚನ್ನಪಟ್ಟಣ ಉಪಚುನಾವಣೆ ಬೆನ್ನಲ್ಲೇ ಬಿಜೆಪಿ ನಾಯಕ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎನ್ನುವ ಗುಸುಗುಸು ಕೇಳಿ ಬರುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿ.ಪಿ.ಯೋಗೀಶ್ವರ್ ಆಗಲಿ ಯಾರೇ ಆಗಲಿ ಕಾಂಗ್ರೆಸ್ಸಿನ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಬರುವ ಎಲ್ಲರಿಗೂ ಪಕ್ಷಕ್ಕೆ ಸ್ವಾಗತ ಎಂದು ಹೇಳಿದ್ದಾರೆ.
ಇನ್ನು ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದರಾದ ಈ.ತುಕಾರಾಂ ಅವರ ಪತ್ನಿ ಅವರಿಗೆ ಟಿಕೆಟ್ ನೀಡಲಾಗುವುದು. ಚನ್ನಪಟ್ಟಣದಲ್ಲಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆ ಆಗಿದೆ. ಡಿ.ಕೆ.ಸುರೇಶ್ ಅವರೂ ಕೂಡ ಪ್ರಭಲ ಅಭ್ಯರ್ಥಿ ಆಗಿದ್ದಾರೆ. ಒಂದೆರಡು ದಿನಗಳಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವ್ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಎನ್ನುವುದು ಸ್ಪಷ್ಟವಾಗಲಿದೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296