ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಹಿಂದುತ್ವವಾದಿ ವೀರ ಸಾವರ್ಕರ್ ಅವರ ಭಾವಚಿತ್ರ ಅಳವಡಿಸಿ ಒಂದು ವರ್ಷ ಕಳೆದಿದ್ದು, ಅದನ್ನು ತೆರವು ಮಾಡುವಂತೆ ಕಾಂಗ್ರೆಸ್ ಮುಖಂಡರು ಒತ್ತಾಯಿಸುತ್ತಿದ್ದಾರೆ. ಈ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಆ ಬಗ್ಗೆ ಸ್ಪೀಕರ್ ಯುಟಿ ಖಾದರ್ ನಿರ್ಧರಿಸಲಿದ್ದಾರೆ ಎಂದು ಹೇಳಿದ್ದಾರೆ.
ಸುವರ್ಣಸೌಧದಲ್ಲಿ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಭಾವಚಿತ್ರ ಅಳವಡಿಸುವ ಪ್ರಸ್ತಾವನೆ ಇದ್ದು, ಈ ಬಗ್ಗೆ ಸದನದ ಸದಸ್ಯರೊಂದಿಗೆ ಚರ್ಚಿಸಲಾಗುವುದು ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ. ಇದರ ನಂತರ ಸಾವರ್ಕರ್ ಭಾವಚಿತ್ರ ವಿಚಾರದ ಕುರಿತ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.