ಹಾಸನ: ರಾಮನಗರ, ಮಂಡ್ಯ, ಚನ್ನಪಟ್ಟಣದಲ್ಲಿ ಚುನಾವಣೆಯಲ್ಲಿ ಸೋತ ಬಳಿಕ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹಾಸನದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಲಿದ್ದಾರೆ ಎಂದು ಹೇಳಲಾಗಿದೆ.
ನಿಖಿಲ್ ಕುಮಾರಸ್ವಾಮಿ ಇದೇ ಮೊದಲ ಬಾರಿಗೆ ಹಾಸನದಲ್ಲಿ ಪಕ್ಷದ ನಾಯಕರ ಸಭೆ ನಡೆಸಿ ಕುತೂಹಲ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಇಲ್ಲಿಂದಲೇ ರಾಜಕೀಯ ಇನಿಂಗ್ಸ್ ಆರಂಭಿಸುತ್ತಾರಾ ಎನ್ನುವ ಚರ್ಚೆಗಳಿಗೆ ಇದು ಕಾರಣವಾಗಿದೆ.
ಹಾಸನ ನಗರದ ಹೊರವಲಯದ ಹೊಯ್ಸಳ ರೆಸಾರ್ಟ್ನಲ್ಲಿ ನಡೆದ ಸಭೆಯಲ್ಲಿ ಹಾಲಿ ಹಾಗೂ ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು, ಮುಖಂಡರಿದ್ದರು. ತಾಪಂ, ಜಿಪಂ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಸಭೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4