ಚೆನ್ನೈ: ಇಂಡಿಯಾವನ್ನು ‘ಹಿಂದಿಯಾ’ವನ್ನಾಗಿ ಮಾಡಲು ನಾವು ಅವಕಾಶ ನೀಡುವುದಿಲ್ಲ ಎಂದು ನಟ ಹಾಗೂ ಮಕ್ಕಳ್ ನೀಧಿ ಮೈಯಂ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಕಮಲ್ ಹಾಸನ್ ಹೇಳಿದ್ದಾರೆ.
ತ್ರಿಭಾಷಾ ಸೂತ್ರ ವಿವಾದ ಮತ್ತು ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ವಿಚಾರವಾಗಿ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಕಮಲ್ ಭಾಗವಹಿಸಿದ ಬಳಿಕ ಮಾತನಾಡಿದ ಅವರು, ಕೇಂದ್ರವು ಎಲ್ಲಾ ರಾಜ್ಯಗಳು ಹಿಂದಿ ಮಾತನಾಡುವಂತೆ ಒತ್ತಾಯಿಸುತ್ತಿದೆ. ಅಲ್ಲದೇ ತನ್ನಿಷ್ಟದ ಪ್ರಕಾರದ ಬಹುಮತದೊಂದಿಗೆ ಚುನಾವಣೆಗಳನ್ನು ಗೆಲ್ಲಲು ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದರು.
ನಮ್ಮ ಕನಸು ಭಾರತವಾಗಿದ್ದರೆ, ಅವರದ್ದು ‘ಹಿಂದಿಯಾ’ ಆಗಿದೆ. ಕೇಂದ್ರ ಸರ್ಕಾರ ಇಂಡಿಯಾವನ್ನು ‘ಹಿಂದಿಯಾ’ವನ್ನಾಗಿ ಪರಿವರ್ತಿಸಲು ಬಯಸಿದೆ ಎಂದು ಆರೋಪಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4