ಭಾರತದ ಮೊದಲ ಮಾನವ ಮಿಷನ್ ಗಗನಯಾನ ಕಾರ್ಯಾರಂಭಗೊಂಡಾಗ ಪ್ರಧಾನಿ ನರೇಂದ್ರ ಮೋದಿ ಅವರು ಬಾಹ್ಯಾಕಾಶಕ್ಕೆ ಹಾರಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಎಸ್ ಸೋಮನಾಥ್ ಅವರು ಹೇಳಿದ್ದಾರೆ.
ಪ್ರಸ್ತುತ ರಾಕೆಟ್ ಗಳು ಚಂದ್ರನ ಸುತ್ತಿನ ಪ್ರಯಾಣಕ್ಕೆ ಸಾಕಾಗುವುದಿಲ್ಲ, ಮಾದರಿಗಳನ್ನು ಮರಳಿ ತರಲು ಮತ್ತು ಭವಿಷ್ಯದ ಮಾನವ ಕಾರ್ಯಾಚರಣೆಗಳಿಗೆ ಹೆಚ್ಚಿನ ಪೇಲೋಡ್ ಸಾಮರ್ಥ್ಯದೊಂದಿಗೆ ರಾಕೆಟ್ ಗಳನ್ನು ಅಭಿವೃದ್ಧಿಪಡಿಸುವುದು ಅತ್ಯಗತ್ಯ ಎಂದು ಇಸ್ರೋ ಅಧ್ಯಕ್ಷರು ಹೇಳಿದರು.
ಗಗನಯಾನ ಮಿಷನ್ನ ಭಾಗವಾಗಿ ಇಸ್ರೋ 3 ದಿನಗಳ ಮಿಷನ್ ಗಾಗಿ ಮೂವರು ಗಗನಯಾತ್ರಿಗಳನ್ನು 400 ಕಿಮೀ ಕಕ್ಷೆಗೆ ಕಳುಹಿಸಲು ಮತ್ತು ಅವರನ್ನು ಸುರಕ್ಷಿತವಾಗಿ ಭೂಮಿಗೆ ಹಿಂದಿರುಗಿಸಲು ಯೋಜಿಸಿದೆ.
ಭಾರತದ ಐತಿಹಾಸಿಕ ಚೊಚ್ಚಲ ಮಾನವಸಹಿತ ಬಾಹ್ಯಾಕಾಶ ಕಾರ್ಯಾಚರಣೆಗೆ ಆಯ್ಕೆಯಾದ ನಾಲ್ವರು ಪೈಲಟ್ ಗಳ ಹೆಸರನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದರು. ಈ ಗಗನಯಾತ್ರಿಗಳೆಂದರೆ — ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್, ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್, ಗ್ರೂಪ್ ಕ್ಯಾಪ್ಟನ್ ಅಂಗದ್ ಪ್ರತಾಪ್ ಮತ್ತು ವಿಂಗ್ ಕಮಾಂಡರ್ ಸುಭಾನ್ಶು ಶುಕ್ಲಾ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA