ಬೆಂಗಳೂರು: ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ್ದೇನೆಂಬುದನ್ನು ಸಾಬೀತು ಮಾಡಿದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಪಕ್ಷಗಳಿಗೆ ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನ ಬದಲಾವಣೆ ಕುರಿತು ನಾನು ಹೇಳಿಕೆ ನೀಡಿದ್ದೇನೆಂಬುದನ್ನು ಸಾಬೀತು ಮಾಡಿದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ. ಒಂದು ವೇಳೆ ಸಾಬೀತು ಮಾಡದಿದ್ದರೆ ನನ್ನ ವಿರುದ್ಧ ಆರೋಪಿಸುವ ಬಿಜೆಪಿ ನಾಯಕರು ರಾಜಕೀಯ ನಿವೃತ್ತಿ ಪಡೆಯುತ್ತಾರೆಯೇ ಎಂದು ಸವಾಲು ಹಾಕಿದರು.
ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಲು ನನಗೆ ತಲೆ ಕೆಟ್ಟಿಲ್ಲ. ನಾನು ನೀಡಿದ ಸಂದರ್ಶನದಲ್ಲಿ ಸತ್ಯ ಮಾತನ್ನಾಡಿದ್ದೇನೆ ಹಾಗೂ ನನ್ನ ರಾಜಕೀಯ ನಿಲುವು ತಿಳಿಸಿದ್ದೇನೆ. ನಾನು ಈ ದೇಶದಲ್ಲಿ ಸಂವಿಧಾನವನ್ನು ಜಾರಿಗೆ ತಂದ ಕಾಂಗ್ರೆಸ್ ಪಕ್ಷದ ಸದಸ್ಯ. ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಕನಸಲ್ಲೂ ಚಿಂತಿಸುವುದು ನಮ್ಮ ಜಾಯಮಾನವಲ್ಲ ಎಂದರು.
ಬಿಜೆಪಿಯವರು ಸುಖಾಸುಮ್ಮನೆ ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದಾರೆ. ತಮ್ಮ ಹುಳುಕು ಮುಚ್ಚಿಕೊಳ್ಳಲು ಈ ರೀತಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4