ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸದ್ಯ ಕರ್ನಾಟಕ ರಾಜಕೀಯ ವಲಯದಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಬಿಜೆಪಿ ಮೈತ್ರಿಗೆ ಇದು ಪ್ರತಿಷ್ಠೆಯ ಕಣವಾಗಿದೆ.
ಪ್ರತಿಷ್ಠಿತ ಸ್ಪರ್ಧೆಗೆ ಯಾರು ಕಣಕ್ಕಿಳಿಯುತ್ತಾರೆ ಎನ್ನುವ ಕುತೂಹಲ ಹೆಚ್ಚಾಗುತ್ತಿದೆ. ಹಲವು ಅಚ್ಚರಿಯ ಹೆಸರುಗಳು ಕೂಡ ಚನ್ನಪಟ್ಟಣ ಕ್ಷೇತ್ರದಲ್ಲಿ ಕೇಳಿಬರುತ್ತಿವೆ. ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಅವರು ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಚನ್ನಪಟ್ಟಣವನ್ನು ಪಡೆಯಲು ಡಿ.ಕೆ. ಶಿವಕುಮಾರ್ ತಮ್ಮ ಕುಟುಂಬದವರನ್ನೇ ಕಣಕ್ಕಿಳಿಸುತ್ತಾರೆ ಎನ್ನಲಾಗಿತ್ತು.
ಈಗ ಸ್ವತಃ ಡಿ.ಕೆ.ಶಿವಕುಮಾರ್ ಅವರು ಎಲ್ಲಾ ಊಹಾಪೋಹಗಳಿಗೆ ಸ್ಪಷ್ಟನೆ ಕೊಟ್ಟಿದ್ದಾರೆ. ನಮ್ಮ ಕುಟುಂಬದಿಂದ ಇನ್ಯಾರಿಗೂ ಚುನಾವಣಾ ರಾಜಕೀಯಕ್ಕೆ ಬರಲು ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ.
ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ ಎಂದಿದ್ದಾರೆ ಡಿಕೆಶಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA