ಬೆಳಗಾವಿ: ಬಿಜೆಪಿಯ ಉಚ್ಛಾಟಿತ ಶಾಸಕ ಯತ್ನಾಳ್ ಹೊಸ ಪಕ್ಷ ಕಟ್ಟುವುದಾಗಿ ಘೋಷಣೆಮಾಡಿದ್ದರು. ಆದ್ರೆ ಈ ಬಗ್ಗೆ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಹೊಸ ಪಕ್ಷ ಸ್ಥಾಪಿಸುವ ಮಾತುಗಳು ಊಹಾಪೋಹ ಮಾತ್ರ. ಯತ್ನಾಳ ಅವರು ಬಿಜೆಪಿಯನ್ನು ಬಿಟ್ಟುಹೋಗುವುದಿಲ್ಲ, ಪಕ್ಷದಲ್ಲೇ ಮುಂದುವರೆಯುತ್ತಾರೆ ಎಂದು ಹೇಳಿದ್ದಾರೆ.
ಯತ್ನಾಳ ಅವರು ಬಿಜೆಪಿಗೆ ವಾಪಸ್ ಬರುತ್ತಾರೆ, ಅವರು ಬೇರೆಡೆಗೆ ಹೋಗುವುದಿಲ್ಲ ಎಂದು ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.
ಯತ್ನಾಳ ಅವರು ಹೊಸ ಪಕ್ಷದ ಬಗ್ಗೆ ಹೇಳಿದ್ದ ಉದ್ದೇಶ ವಿಭಿನ್ನವಾಗಿದೆ. ಮಾಧ್ಯಮಗಳಲ್ಲಿ ಬಂದಿರುವ ವರದಿಗಳು ಅಸಂಗತವಾಗಿವೆ. ಹಿಂದೂತ್ವದ ಆದರ್ಶಗಳಿಗಾಗಿ ಯತ್ನಾಳ ಹೊಸ ಪಕ್ಷ ಕಟ್ಟುವ ಸಾಧ್ಯತೆಯ ಬಗ್ಗೆ ಚರ್ಚೆಗಳು ನಡೆದಿದ್ದವು ಎಂದು ಒಪ್ಪಿಕೊಂಡ ಅವರು, “ಆರ್‌ಎಸ್‌ಎಸ್ ಇರುವಾಗ ಹೊಸ ಪಕ್ಷದ ಅವಶ್ಯಕತೆ ಇಲ್ಲ, ಅಷ್ಟೇ ಸಾಕು ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4