ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಬೆಳಗಾವಿ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟ ದರ್ಶನ್ ಅವರು ವಿಲ್ಸನ್ ಗಾರ್ಡನ್ ನಾಗನ ಜೊತೆಗೆ ಜೈಲಿನಲ್ಲಿ ಕುಳಿತಿರುವ ಫೋಟೋ ವೈರಲ್ ಆಗಿತ್ತು.
ನಂತರದಲ್ಲಿ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದ್ದು, ಅವರೊಂದಿಗೆ ಬಂಧಿತರಾಗಿದ್ದ ಇತರೆ ಆರೋಪಿಗಳನ್ನು ಶಿವಮೊಗ್ಗ, ಮೈಸೂರು, ಧಾರವಾಡ, ಕಲಬುರಗಿ ಜೈಲುಗಳಿಗೆ ಶಿಫ್ಟ್ ಮಾಡಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ವಿಲ್ಸನ್ ಗಾರ್ಡನ್ ನಾಗನನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ರೌಡಿಶೀಟರ್ ನಾಗ ಸೇರಿದಂತೆ ನಾಲ್ವರು ಆರೋಪಿಗಳನ್ನು ಶಿಫ್ಟ್ ಮಾಡಲಾಗಿದೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q