ವೈ.ಎನ್.ಹೊಸಕೋಟೆ: ವಿಕಸಿತ ಭಾರತಕ್ಕಾಗಿ ಮತ್ತೊಮ್ಮೆ ಬಿಜೆಪಿಯನ್ನು ಗೆಲ್ಲಿಸಿ ಎಂದು ಮಾಜಿ ಸಂಸದ ಜನಾರ್ದನ ಸ್ವಾಮಿ ತಿಳಿಸಿದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ಪರವಾಗಿ ಗ್ರಾಮದಲ್ಲಿಇಂದು ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಗ್ರಾಮದ ಚೌಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮತಯಾಚನೆ ಮಾಡಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಈ ಹತ್ತು ವರ್ಷಗಳ ಕಾಲ ಭಾರತ ದೇಶವನ್ನು ಕಟ್ಟಿ ಹೊಸದಾಗಿ ವಿಶ್ವದ ಮುಂದೆ ಅಭಿವೃದ್ಧಿ ಹೊಂದಿದ ದೇಶವೆಂದು ತೋರಿಸಿ ಕೊಟ್ಟ ಧೀಮಂತ ನಾಯಕರಾಗಿದ್ದಾರೆ.
ಇವರು ಒಬ್ಬ ಸಾಮಾನ್ಯ ಬಡ ಕುಟುಂಬದವರು ಕೂಡಾ ಈ ದೇಶದ ಪ್ರಧಾನಿ ಆಗಬಹುದು ಎಂದು ತೋರಿಸಿಕೊಟ್ಟರು. ಹಾಗೇ ಅವರು ನೀಡಿದ ಅಭಿವೃದ್ಧಿ ಯೋಜನೆಯಿಂದಾಗಿ ಮೂರನೇ ಬಾರಿಗೆ 400 ಹೆಚ್ಚು ಲೋಕ ಸಭಾ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಮತಷ್ಟು ದೇಶವನ್ನು ಉನ್ನತ ಸ್ಥಾನದಲ್ಲಿ ನೋಡುವುದಾಗಿ ಮಾಧ್ಯಮದವರಿಗೆ ತಿಳಿಸಿದರು.
ನಾನು ಸಂಸದನಾದ ಸಂದರ್ಭದಲ್ಲಿ ಭದ್ರಾ ಮೇಲ್ದಂಡೆ ಯೋಜನೆ, ಹಾಗೂ DRDO,ISRO ದಂತಹ ಶಾಶ್ವತ ಯೋಜನೆಗಳನ್ನು ಜಾರಿಗೆ ತಂದು ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದಿವೆ ಎಂದರು.
ಆದಾಗಿ ಈ ಬಾರಿ ಕರ್ನಾಟಕದಲ್ಲಿ 28 ಕ್ಷೇತ್ರದಲ್ಲಿ ನಮ್ಮ ಶಕ್ತಿಯನ್ನು ಹೆಚ್ಚಿಸುವ ಮೂಲಕ ದೇಶಕ್ಕೆ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಮತದಾರರು ಮತೊಮ್ಮೆ ನರೇಂದ್ರ ಮೋದಿ ಅವರಿಗೆ ಶಕ್ತಿ ನೀಡಬೇಕೆಂದು ಮನವಿ ಮಾಡಿದರು.
ಜೆಡಿಎಸ್ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಮಾತನಾಡಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಮನೆ ಮನೆಗೆ ತೆರಳಿ ಎರಡು ಪಕ್ಷಗಳ ಸಾಧನೆಗಳನ್ನು ಹಾಗೂ ಕೇಂದ್ರದ ಯೋಜನೆಗಳನ್ನು ಮತದಾರರಿಗೆ ತಿಳಿಸಬೇಕು. ಆ ಮೂಲಕ ಅತಿ ಹೆಚ್ಚು ಮತಗಳ ಗಳಿಸಿ ಚಿತ್ರದುರ್ಗ ಲೋಕಸಭಾ ಎನ್.ಡಿ.ಎ. ಅಭ್ಯರ್ಥಿ ಗೋವಿಂದ ಕಾರಜೋಳ ಅವರನ್ನು ಗೆಲ್ಲಿಸಬೇಕು ಎಂದರು.
ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ಸಂಸದ ಜನಾರ್ದನ ಸ್ವಾಮಿ ಮತ್ತು ಮಾಜಿ ಶಾಸಕ ಕೆಎಂ ತಿಮ್ಮರಾಯಪ್ಪರವರನ್ನು ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.
ಇದೇ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ರಂಗಣ್ಣ, ಬಲರಾಮರೆಡ್ಡಿ, ಜಿ.ಟಿ.ಗಿರೀಶ್, ಸೂರ್ಯನಾರಾಯಣ,ದೊಡ್ಮನೆ ತಿಪ್ಪೇಸ್ವಾಮಿ, ಬಿ.ಹೊಸಹಳ್ಳಿ ನಾಗರಾಜು, ದುಗ್ಗಿ ವೆಂಕಟೇಶ್, ವೈ.ಎನ್.ಹೊಸಕೋಟೆ ಹೋಬಳಿ ಜೆಡಿಎಸ್ ಅಧ್ಯಕ್ಷ ಸತ್ಯನಾರಾಯಣ, ಗೌಡತಿಮ್ಮನಹಳ್ಳಿ ರಾಮಾಂಜಪ್ಪ, ಎ.ಓ.ನಾಗರಾಜು, ಮುರಳಿಕೃಷ್ಣ, ಯರ್ರಪ್ಪ, ತಿಪ್ಪೇಸ್ವಾಮಿ, ಅನಿಲ್, ನಾಗರಾಜು, ನಂದೀಶ್, ಎರಡೂ ಪಕ್ಷದ ಅನೇಕ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ನಂದೀಶ್ ನಾಯ್ಕ ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA