nammatumakuru

    Subscribe to Updates

    Get the latest creative news from FooBar about art, design and business.

    What's Hot

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026
    Facebook Twitter Instagram
    ಟ್ರೆಂಡಿಂಗ್
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    • ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
    • ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
    • ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    ತುಮಕೂರು May 5, 2026

    ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ

    By adminMay 5, 2026No Comments2 Mins Read
    sira

    ತುಮಕೂರು: ಶಿಕ್ಷಣದ ರೂವಾರಿ ಮಹಾತ್ಮ ಜ್ಯೋತಿಬಾ ಫುಲೆ ಅವರ 200ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ತುಮಕೂರಿನ ಕೊಡಿಪಾಳ್ಯ ಮತ್ತು ಬಾಳಬಸವನಹಳ್ಳಿಯಲ್ಲಿ ಒಂದು ದಿನದ ಮಕ್ಕಳ ಬೇಸಿಗೆ ಶಿಬಿರ ಮಾಡಲಾಯಿತು.

    “ಮಹಾನ್ ವ್ಯಕ್ತಿಗಳ ಜೀವನ ಹಾಗೂ ಸಂಘರ್ಷ ವನ್ನು ಪರಿಚಯಿಸುವ ಮೂಲಕ, ಅವರು ಜೀವನದಲ್ಲಿ ಅಳವಡಿಸಿಕೊಂಡ ಮೌಲ್ಯಗಳನ್ನು ಹೇಳಿಕೊಡುವುದರ ಮೂಲಕ ಮಾತ್ರವೇ ಮಕ್ಕಳನ್ನು ನೀತಿ ನೈತಿಕತೆ ಹಾಗೂ ಮೌಲ್ಯಾಧಾರಿತ ವ್ಯಕ್ತಿಯನ್ನಾಗಿ ಮಾಡಲು ಸಾಧ್ಯ” ಎಂದು ಎಐಡಿಎಸ್ಓ ಜಿಲ್ಲಾ ಸೆಕ್ರಟೆರಿಯಟ್ ಸದಸ್ಯರಾದ ಭರತ್ ಅವರು ಶಿಬಿರ ಉದ್ದೇಶಿಸಿ ಮಾತನಾಡಿದರು.

    ಶಿಬಿರದ ಮೋದಲ ಅಧಿವೇಶನದಲ್ಲಿ ಶೋಷಣೆ ವಿರುದ್ಧ ಶಿಕ್ಷಣದ ಕಿಡಿ ಹಚ್ಚಿದ ಜ್ಯೋತಿ ರಾವ್  ಫುಲೆ ಅವರ ಜೀವನ ಚರಿತ್ರೆ ಕುರಿತು ಅವರು ಮಾತನಾಡುತ್ತಾ, “ಶತಮಾನಗಳ ಕಾಲ ಕವಿದಿದ್ದ ಅಂಧಕಾರವನ್ನು ಹೊಡೆದೋಡಿಸಲು ಜ್ಞಾನದ ಬೆಳಕನ್ನು ನೀಡಲು ಅವರು ಶಾಲೆಗಳನ್ನು ಆರಂಭಿಸಿದರು. ಶಿಕ್ಷಣದಿಂದ ಮಾತ್ರವೇ ಮನುಷ್ಯರು ವಿಮರ್ಶಾತ್ಮಕ ಧೋರಣೆ ಮತ್ತು ಆತ್ಮ ಸ್ಥೈರ್ಯ ವನ್ನು ಹೊಂದಲು ಸಾಧ್ಯ” ಎಂಬುದನ್ನು ಅವರು ಬಲವಾಗಿ ಹೇಳಿದರು. “ಶಿಕ್ಷಣವು ಸಾರ್ವತ್ರಿಕವಾಗಿರಬೇಕು ಮತ್ತು ಎಷ್ಟೇ ಸಂಖ್ಯೆ ಇದ್ದರೂ ಅದು ಎಲ್ಲರನ್ನೂ ತಲುಪುವಂತೆ ಇರಬೇಕು”  ಎಂದು ಹೋರಾಟಗಳನ್ನು ಕಟ್ಟಿದರು. ಅವರ ಹೋರಾಟದ ಪ್ರತಿಫಲವಾಗಿ ಇಂದು ಹೆಣ್ಣು ಮಕ್ಕಳು, ಕೆಳ ಸಮುದಾಯ ಸೇರಿದಂತೆ ಎಲ್ಲರೂ ಶಿಕ್ಷಣವನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೆ ನಮ್ಮನ್ನು ಆಳುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಇಂದು ಅಶ್ಲೀಲ ಸಿನಿಮಾ, ಮದ್ಯ,ಮಾದಕ ವಸ್ತುಗಳ ಮಾರಾಟ ಹಾಗೂ ಶಿಕ್ಷಣದಲ್ಲಿ ಮೌಲ್ಯ ಆಧಾರಿತ ಪಠ್ಯದ ಕೊರತೆಯಿಂದಾಗಿ ಮಕ್ಕಳು ದುಶ್ಚಟಗಳಿಗೆ ಬಲಿ ಬೀಳುವಂತೆ ಮಾಡುತ್ತಿದ್ದಾರೆ. ಇನ್ನೊಂದು ಕಡೆ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಿ ಬಡ – ಮಧ್ಯಮ ವರ್ಗದ ಮಕ್ಕಳನ್ನು ಸಂಪೂರ್ಣವಾಗಿ ಶಿಕ್ಷಣದಿಂದ ದೂರ ಮಾಡುತ್ತಿವೆ ಎಂದರು.

    ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿ ಸಮುದಾಯವು ಮಹಾತ್ಮ ಜ್ಯೋತಿಬಾ ಫುಲೆ ಅವರ ಸಾರ್ವತ್ರಿಕ ಶಿಕ್ಷಣದ ಕೂಗಿನೊಂದಿಗೆ ನಮ್ಮೂರ ಶಾಲೆ ಉಳಿಸಲು ಮುಂದೆ ಬರಬೇಕು ಎಂದು ಹೇಳಿದರು.

    ಈ ಶಿಬಿರದಲ್ಲಿ ಮಕ್ಕಳಿಗಾಗಿ ಕಥೆಗಳು, ಆಟೋಟಗಳು, ಹಾಡುಗಳು ಹಾಗೂ ಇನ್ನಿತರ ಚಟುವಟಿಕೆಗಳು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಎಐಡಿಎಸ್ ಓ ಜಿಲ್ಲಾ ಸದಸ್ಯರಾದ ಭರತ್ ಸೈಯದ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!

    July 27, 2026

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಬೃಹತ್ ಅಕ್ರಮ ನಡೆದಿದ್ದು, 400 ಹುದ್ದೆಗಳಿಗೆ ತಲಾ 2…

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.