ಮುಜರಾಯಿ ಇಲಾಖೆ ವ್ಯಾಪ್ತಿಯ ಪ್ರಮುಖ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ಸಾಮಾನ್ಯ ಸಂಗ್ರಹಣಾ ನಿಧಿಯನ್ನು, ಕಡಿಮೆ ಆದಾಯ ಇರುವ ‘ಸಿ’ ವರ್ಗದ ದೇವಾಲಯಗಳಿಗೆ ಬಳಸುವ ಉದ್ದೇಶದ ಕಾನೂನು ತಿದ್ದುಪಡಿ ವಿಧೇಯಕವನ್ನು ರಾಜ್ಯಪಾಲರು ಸರಕಾರಕ್ಕೆ ವಾಪಸ್ ಕಳಿಸಿದ್ದಾರೆ.
ಅರ್ಚಕರಿಗೆ ವಿಮೆ ಮತ್ತಿತರ ಸೌಲಭ್ಯಗಳನ್ನು ಹೆಚ್ಚಿಸುವ ಜತೆಗೆ, ಆದಾಯವಿಲ್ಲದ ದೇವಾಲಯಗಳಿಗೆ ನೀಡುವ ಉದ್ದೇಶದಿಂದ ಕಳೆದ ಅಧಿವೇಶನದಲ್ಲಿ ‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ -2024’ ಅನ್ನು ರೂಪಿಸಲಾಗಿತ್ತು.
1997ರಲ್ಲಿ ಈ ಕಾಯಿದೆಗೆ ತರಲಾಗಿದ್ದ ತಿದ್ದುಪಡಿಗೆ ಸಂಬಂಧಿಸಿದ ಅರ್ಜಿ ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಇದೆ. ಈ ಹಂತದಲ್ಲಿ ಮತ್ತೆ ಕಾಯಿದೆಗೆ ತಿದ್ದುಪಡಿ ಮಾಡಬಹುದೇ ಎಂಬ ಕುರಿತು ಹೆಚ್ಚಿನ ವಿವರಣೆ ಮತ್ತು ಸ್ಪಷ್ಟನೆ ಅಗತ್ಯವಿದೆ ಎಂದು ರಾಜ್ಯಪಾಲರು ವಿಧೇಯಕ ವಾಪಸ್ ಕಳಿಸಿರುವುದಕ್ಕೆ ಕಾರಣ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


