ಮಂಡ್ಯ: ರೇವಣ್ಣನಿಗೆ ಎದುರಾದ ಪರಿಸ್ಥಿತಿ ಕುಮಾರಸ್ವಾಮಿಯವಿರಗೂ ಎದುರಾಗಲಿದ್ದು, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಜೈಲಿಗೆ ಹೋಗುವ ಕಾಲ ದೂರವಿಲ್ಲ ಎಂದು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಹೇಳಿದ್ದಾರೆ.
ಪ್ರಜ್ವಲ್ ಲೈಂಗಿಕ ಹಗರಣ ಮತ್ತು ಎಚ್.ಡಿ. ರೇವಣ್ಣ ಅಪಹರಣ ಪ್ರಕರಣದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ಶೀಘ್ರದಲ್ಲೇ ಜೈಲಿಗೆ ಹೋಗಲಿದ್ದಾರೆ ಎಂದರು.
ಕೆಲವೇ ದಿನಗಳಲ್ಲಿ ಮಹಿಳೆಯರು ಕುಮಾರಸ್ವಾಮಿ ವಿರುದ್ಧವೂ ದೂರು ಕೊಡುತ್ತಾರೆ. ಎಚ್ ಡಿಕೆ ವಿರುದ್ದ ದೂರು ದಾಖಲಾದ ಬಳಿಕ ಅವರೂ ಸಹ ಜೈಲಿಗೆ ಹೋಗುವ ಪರಿಸ್ಥಿತಿ ಬರಬಹುದು ಎಂದರು.
ಬಿಜೆಪಿ ನಾಯಕರು ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ದೇಶದಿಂದ ಪರಾರಿಯಾಗಿದ್ದು, ವಿದೇಶಗಳಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ಉದಯ್ ಪ್ರತಿಪಕ್ಷಗಳ ವಿರುದ್ದ ಹರಿಹಾಯ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296