ಬೆಂಗಳೂರು: ನೀರು ಹಿಡಿಯಲು ಹೋದ ವೇಳೆ ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆಯ ಆನಂದಪುರದ ಮಾರುಕಟ್ಟೆ ರಸ್ತೆಯಲ್ಲಿ ಗುರುವಾರ ನಡೆದಿದೆ.
ಸೆಲ್ವಿ (24) ಮೃತಪಟ್ಟ ಮಹಿಳೆಯಾಗಿದ್ದಾರೆ. ಬೆಳಗಿನ ಜಾವ ನೀರನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿದೆ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.
ಮೋಟಾರ್ ಗೆ ಅಳವಡಿಸಿದ್ದ ವೈರ್ ತಗುಲಿ ಮಹಿಳೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಘಟನೆ ಬಳಿಕ ಮಾರುಕಟ್ಟೆ ರಸ್ತೆಯಲ್ಲಿ ಬಿಬಿಎಂಪಿ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಅಕ್ರಮವಾಗಿ ಮೋಟಾರ್ ಗೆ ವಿದ್ಯುತ್ ಕನೆಕ್ಷನ್ ಕೊಡಲಾಗಿತ್ತು, ಈ ಹಿನ್ನೆಲೆ ಈ ಘಟನೆ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕ್ಷೇತ್ರದ ಶಾಸಕ ಜಮೀರ್ ಅವರು ಸ್ಥಳಕ್ಕಾಗಮಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ಸ್ಥಳೀಯರ ಪ್ರತಿಭಟನೆ ಪರಿಣಾಮ ಮೈಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಎದುರಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4