ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಅಮೃತಾ ಶರ್ಮಾ ಮೃತ ಯುವತಿ ಆಗಿದ್ದು, ಲಖನೌ ಮೂಲದ ಮಹಿಳೆ ಕುಟುಂಬದ ಜೊತೆ ಖಾಸಗಿ ಅಪಾರ್ಟೆಂಟ್ ನಲ್ಲಿ ವಾಸವಿದ್ದರು. ಯಲಹಂಕ ಬಳಿಯ ನಾಗೇನಹಳ್ಳಿಯಲ್ಲಿ ಅಪಾರ್ಟ್ ಮೆಂಟ್ ನಲ್ಲಿ ಘಟನೆ ನಡೆದಿದ್ದು, ಅಪಾರ್ಟ್‌ಮೆಂಟ್ 10ನೇ ಮಹಡಿಯಿಂದ ಬಿದ್ದ ಮಹಿಳೆ ಸಾವನ್ನಪ್ಪಿದ್ದಾಳೆ. ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಘಟನೆ ನಡೆದಿದೆ.
ಕಿಚನ್ ಗೆ ಅಟ್ಯಾಚ್ ಆದ ಬಾಲ್ಕನಿಯಿಂದ ಹಾರಿದ ಮಹಿಳೆಯನ್ನು ಸ್ಥಳೀಯರೇ ಅಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅಮೃತಾ ಶರ್ಮಾ ಮೃತಪಟ್ಟಿದ್ದು, ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


