ಬೆಂಗಳೂರು: ಭಾರೀ ಮಳೆಗೆ ಬೆಂಗಳೂರಲ್ಲಿ ಮನೆಯ ಗೋಡೆ ಕುಸಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ವೈಟ್ ಫೀಲ್ಡ್ ನಲ್ಲಿ ಈ ದುರ್ಘಟನೆ ನಡೆದಿದೆ.
ಶಶಿಕಲಾ(35) ಮೃತಪಟ್ಟ ಮಹಿಳೆಯಾಗಿದ್ದಾರೆ. ಇವರು ಖಾಸಗಿ ಕಂಪನಿ ಕಂಪನಿಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು.
ಇಡೀ ರಾತ್ರಿ ಮಳೆಗೆ ಗೋಡೆ ನೆನೆದಿದ್ದರಿಂದ ಕುಸಿದು ಶಶಿಕಲಾ ಮೇಲೆ ಬಿದ್ದಿದೆ. ಪರಿಣಾಮ ಶಶಿಕಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಶಶಿಕಲಾಗೆ ಇಬ್ಬರು ಸಣ್ಣ ಮಕ್ಕಳಿದ್ದು, ಗಂಡ ಕೂಡ ಕೂಲಿ ಕೆಲಸ ಮಾಡುತ್ತಿದ್ದರು. ಘಟನಾ ಸ್ಥಳಕ್ಕೆ ಮಹದೇವಪುರ ಪೊಲೀಸರು ಭೇಟಿ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW